ಒಳಮೀಸಲಾತಿ ಜಾರಿಗೆ ಬರುವವರೆಗೆ ರಾಜ್ಯದಲ್ಲಿ ಯಾವುದೇ ನೇಮಕಾತಿ ಮಾಡಬಾರದೆಂದು ಮುಖ್ಯಮಂತ್ರಿಗಳಿಗೆ ಮನವಿ

WhatsApp Image 2024-10-21 at 1.14.14 PM
Published on

ಗದಗ: ಸುಪೀಂಕೋರ್ಟ ತೀರ್ಪಿನ್ವಯ ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತರಬೇಕು ಒಳಮೀಸಲಾತಿ ಜಾರಿಗೆ ಬರುವವರೆಗೆ ರಾಜ್ಯದಲ್ಲಿ ಯಾವುದೇ ನೇಮಕಾತಿ ಮಾಡಬಾರದೆಂದು ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಗದಗ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಪರಸಪ್ಪ ಪರಾಪೂರ ಇವರ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಗದಗ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಪರಸಪ್ಪ ಪರಾಪೂರ ಇವರು ಮಾತನಾಡಿ ಮಾದಿಗ ಸಮುದಾಯಕ್ಕೆ ನ್ಯಾಯವಾಗಿ ದೊರಕಬೇಕಾಗಿದ್ದ ಮೀಸಲಾತಿ ಪ್ರಮಾಣ ದೊರೆಯದೆ ಇದ್ದುದರಿಂದ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ವರ್ಗೀಕರಣಕ್ಕಾಗಿ ಮೂವತ್ತು ವರ್ಷಗಳ ಕಾಲ ನಿರಂತರ ಹೋರಾಟ ಮಾಡಿದ ಫಲ ಮಾನ್ಯ ಸುಪ್ರೀಂಕೋರ್ಟ್ ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ಐತಿಹಾಸಿಕ ತೀರ್ಪನ್ನು ನೀಡಿದ ಮೇಲೂ ರಾಜ್ಯ ಸರ್ಕಾರ ಇನ್ನೂವರೆಗೆ ಒಳಮೀಸಲಾತಿಗಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿಯಾಗಿದೆ. ರಾಜ್ಯಾದ್ಯಂತ ಮಾದಿಗ ಸಮಾಜವು ಅಕ್ಟೋಬರ 16 ರಂದು ಬೃಹತ್ ಪ್ರತಿಭಟನೆಯನ್ನು ಮಾಡಿ ತಕ್ಷಣವೇ ಜಾರಿಗೆ ಆಗ್ರಹಿಸಿದೆ. ರಾಜ್ಯದ ಮಾದಿಗ ಸಮಾಜದ ಈ ಒಳಮೀಸಲಾತಿ ಬೇಡಿಕೆಯನ್ನು ರಾಜ್ಯ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇದೇ ತಿಂಗಳ ಅಕ್ಟೋಬರ 24 ರಂದು ನಡೆಯುವ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡು ಜಾರಿಗೆ ತರಬೇಕೆಂದು ಆಗ್ರಹಿಸಿದರು.
ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ನಿರ್ಣಯ ಕೈಗೊಂಡು, ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ ಎರಡು ತಿಂಗಳ ಒಳಗಾಗಿ ಒಳ ಮೀಸಲಾತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ ಅಲ್ಲದೇ ಆ ರಾಜ್ಯದಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿದಿದ್ದಾರೆ.
ತೆಲಂಗಾಣ ಮಾದರಿಯಂತೆ ಕರ್ನಾಟಕದಲ್ಲಿಯೂ ತುಂಬುವ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಬೇಕು, ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವ 384 ಗೆಜೆಟೆಡ್ ಪ್ರಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ಅಧಿಸೂಚನೆ ಹೊರಡಿಸಿರುವ ನೋಟಿಫಿಕೇಷನ್‌ನ್ನು ಕೂಡಲೇ ತಡೆ ಹಿಡಿಯಬೇಕು. ಅದರಂತೆ ರಾಜ್ಯದಲ್ಲಿ ಹೊಸದಾಗಿ ಯಾವುದೇ ನೇಮಕಾತಿಗಳನ್ನು ಒಳಮೀಸಲಾತಿ ಜಾರಿಗೆ ತರುವವರೆಗೆ ನೇಮಕ ಪ್ರಕ್ರಿಯೆಯನ್ನು ಮಾಡಬಾರದು.
ಒಳ ಮೀಸಲಾತಿ ಜಾರಿಗೆ ಆಗುವವರೆಗೂ ರಾಜ್ಯ ಸರ್ಕಾರದ ಯಾವುದೇ ಇಲಾಖೆಗಳ ಹಾಗೂ ಹುದ್ದೆಗಳನ್ನು ತುಂಬುವ ಪ್ರಕ್ರಿಯೆಗಳು ಸರ್ಕಾರದ ಯೋಜನೆಗಳಲ್ಲಿ ಆರ್ಥಿಕ ಮೀಸಲಾತಿ , ಕೆ.ಐ.ಎ.ಡಿ.ಬಿ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ಹಂಚಿಕೆ ಮಾಡುವ ಪ್ರಕ್ರಿಯೆಯೂ ಸ್ಥಗಿತಗೊಳಿಸಬೇಕು. ಸರ್ವರಿಗೂ ಸಮಪಾಲು-ಸಮಬಾಳು, ಸಾಮಾಜಿಕ ನ್ಯಾಯ, ಸಮಾನತೆಗಾಗಿ ಹೋರಾಟ ಮಾಡಿಕೊಂಡು ಬಂದಿರುವ ಮಾನ್ಯ ಮುಖ್ಯಮಂತ್ರಿಗಳಾದ ತಮ್ಮ ನೇತೃತ್ವದಲ್ಲಿ ಈ ಶೋಷಿತ, ಅಸ್ಪೃಶ್ಯ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಸುಪ್ರೀಂಕೋರ್ಟ್ ತೀರ್ಪಿನ ತಕ್ಷಣ ಆದೇಶ ಹೊರಡಿಸಬೇಕೆಂದು ಅನ್ವಯ ಒಳ ಮೀಸಲಾತಿ ಜಾರಿಗೆ ತರಬೇಕೆಂದು ಮನವಿ ಪತ್ರವನ್ನು ಸÀಲ್ಲಿಸಿದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಮಾದಿಗ ಸಮಾಜದ ಯುವ ನಾಯಕರಾದ ಗಣೇಶ್ ಹುಬ್ಬಳ್ಳಿ, ಮಂಜುನಾಥ್ ತೌಜಲ್, ವಿರುಪಾಕ್ಷಿ ಗೌಡರ್, ಮರಿಯಪ್ಪ ಪರಾಪೂರ್, ಪರಶುರಾಮ್ ಸಂಗಾಪೂg,À ಮಂಜುನಾಥ್ ಪರಾಪೂರ್, ಶಿವಾನಂದ್ ಹೇಳವತ್ತಿ, ಮಂಜುನಾಥ ಅಕ್ಕಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net