ಶಿಕ್ಷಕರಾಗಿ ಪ್ರೇರಣಾತ್ಮಕ ಪಾಠ ಮಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು.

01GDG03
Published on

Gadag: ಜಿಲ್ಲೆಯ ಶಿಕ್ಷಣದ ಗುಣಮಟ್ಟ ಉನ್ನತ ಮಟ್ಟಕ್ಕೇರಲು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶಕ್ಕಾಗಿ ಮುಂದಿನ ದಿನಗಳಲ್ಲಿ ಪ್ರತೀ ಪ್ರೌಢ ಶಾಲೆಗಳಲ್ಲಿ ಕೈಗೊಳ್ಳಬೇಕಾದ ವಿನೂತನ ಕ್ರಮಗಳ ಕುರಿತು ಆತ್ಮೀಯವಾಗಿ ಮುಖ್ಯ ಶಿಕ್ಷಕರೊಂದಿಗೆ ಸಂವಾದ ಮಾಡಿ, ಸರಿಯಾದ ಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನ, ಚಟುವಟಿಕೆ ಆಧಾರಿತ ಕಲಿಕೆ, ಶಿಸ್ತಿನಿಂದ ಶಾಲಾ ಹಂತದ ಘಟಕ ಪರೀಕ್ಷೆ ಹಾಗೂ ಜಿಲ್ಲಾ ಪರೀಕ್ಷೆ ಸಂಘಟನೆ ಈ ಎಲ್ಲ ಯೋಜನೆಗಳನ್ನು ಮುಖ್ಯೋಪಾಧ್ಯಾಯರು ತಮ್ಮ ಶಾಲೆಯ ಶಿಕ್ಷಕರೆಲ್ಲರೊಂದಿಗೆ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭರತ್ ಎಸ್ ಕಿವಿಮಾತು ಹೇಳಿದರು.

ಅವರು, ಶನಿವಾರ ಗದಗ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ "ಗದಗ ಶಹರವಲಯ ಹಾಗೂ ಗದಗ ಗ್ರಾಮೀಣ ವಲಯದ" ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ  ಜಿಲ್ಲೆಯ "ಶೈಕ್ಷಣಿಕ ಅಭಿವೃದ್ಧಿ ಯೋಜನೆ" ಹಾಗೂ "ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗಾಗಿ ಹಾಕಿಕೊಂಡ ಚಟುವಟಿಕೆಗಳ" ಬಗ್ಗೆ ಹಾಗೂ ತಮ್ಮ ಶಾಲೆಯ ವಿದ್ಯಾರ್ಥಿಗಳಿಗಾಗಿ ತಮ್ಮ ಮಿತಿಯಲ್ಲಿ ವಿಶೇಷ ಚಟುವಟಿಕೆಗಳನ್ನು ಆಯೋಜಿಸುವಂತೆ ಪ್ರತಿಯೊಬ್ಬ ಮುಖ್ಯ ಶಿಕ್ಷಕರ ಮನಮುಟ್ಟುವಂತೆ ಒಬ್ಬ ಕ್ರಿಯಾಶೀಲ ಶಿಕ್ಷಕರಂತೆ ಪ್ರೇರಣಾದಾಯಿಯಾಗಿ ಪ್ರೋತ್ಸಾಹಿಸಿ, ವಿಶಿಷ್ಟ ರೀತಿಯಲ್ಲಿ ಮಾರ್ಗದರ್ಶನ ಮಾಡಿದರು.

ಜಿಲ್ಲಾ ಹಂತದ ಪರೀಕ್ಷೆ: ಜಿಲ್ಲೆಯಲ್ಲಿ ಏಕಕಾಲಕ್ಕೆ ನಾಲ್ಕು ವಿಶೇಷ ಪರೀಕ್ಷೆಗಳನ್ನು ನಡೆಸಲಾಗುವುದು, ಪ್ರಶ್ನೆ ಪತ್ರಿಕೆ ಜಿಲ್ಲಾ ಮಟ್ಟದಲ್ಲಿ ತಯಾರಿಸಿ, ಶಾಲಾ ಹಂತದಲ್ಲಿ ಪರೀಕ್ಷೆ ಸಂಘಟಿಸಿ, ಜಿಲ್ಲಾ ಹಾಗೂ ತಾಲ್ಲೂಕು ಶಾಲಾ ಮಟ್ಟದಲ್ಲಿ ಎಲ್ಲಾ ಶಾಲೆಗಳ ಮಕ್ಕಳ ಫಲಿತಾಂಶ ವಿಶ್ಲೇಷಣೆ ಮಾಡಲಾಗುವುದು. ಫಲಿತಾಂಶ ಆಧರಿಸಿ ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ಚಟುವಟಿಕೆಗಳನ್ನು ರೂಪಿಸಿ ಎಂದರು. ಜಿ. ಎಲ್. ಬಾರಾಟಕ್ಕೆ, ಆರ್. ಎಸ್. ಬುರಡಿ ಹಾಗೂ ವಿ ವಿ ನಡುವಿನಮನಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶ್ರೀ ಎಚ್. ಬಿ. ರಡ್ಡೇರ ಮುಂ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net