ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾಅವರಿಂದ ವಿವಿಧೆಡೆ ಪರಿಶೀಲನೆ

CBT visit 2 (1)
Published on

ಗದಗ: 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದಿಂದ ಕರ್ನಾಟಕ-ಒನ್ ಹಾಗೂ ಗ್ರಾಮ-ಒನ್ ಕೇಂದ್ರಗಳ ಮುಖಾಂತರ ವಿದ್ಯಾರ್ಥಿಗಳಿಗೆ ಬಸ್ ಪಾಸ್‍ಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿದ್ದು  ಈ ಕುರಿತು   ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ. ಅವರು ಬುಧವಾರದಂದು ಸಿ.ಬಿ.ಟಿ ಹುಬ್ಬಳ್ಳಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪಾಸ್ ವಿತರಣೆ ವ್ಯವಸ್ಥೆಯ ಕುರಿತು ಪರಿಶೀಲಿನೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೆÇೀರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿದ ಓರ್ವ ವಿದ್ಯಾರ್ಥಿಯ ಬಸ್ ಪಾಸನ್ನು ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ವಿತರಣೆ ಮಾಡಿದರು. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ. ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ  ಕಟ್ಟುನಿಟ್ಟಿನ  ಕ್ರಮ ಕೈಗೊಳ್ಳಲು ನಿರ್ದೇಶಿಸಿದರು.

ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ ಮತ್ತು ಹುಬ್ಬಳ್ಳಿ ಗ್ರಾಮಾಂತರ ವಿಭಾಗಗಳಿಗೆ ಭೇಟಿ ನೀಡಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ಕಛೇರಿಯಲ್ಲಿ ಸಭೆ ನಡೆಸಿದರು. ಸಿ.ಬಿ.ಟಿ. ಬಹುಮಹಡಿ ಕಟ್ಟಡದ ವಾಣಿಜ್ಯ ಮಳಿಗೆಗಳನ್ನು, ಬಸ್ ನಿಲ್ದಾಣದ ಸ್ವಚ್ಛತೆಯನ್ನು ಪರಿಶೀಲನೆ ಮಾಡಿದರು. ಪ್ರಸ್ತುತ ಮಳೆಗಾಲ ಪ್ರಾರಂಭವಾಗುತ್ತಿದ್ದು ವಾಹನಗಳ ಮೇಲ್ಛಾವಣಿ ಸೋರದಂತೆ ಕ್ರಮ ಕೈಗೊಳ್ಳಲು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸಾರಿಗೆ ಕಾರ್ಯಾಚರಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಿದರು. ಸಿ.ಬಿ.ಟಿ.-ಹುಬ್ಬಳ್ಳಿಯಿಂದ ಹೊಸೂರ ಕ್ರಾಸ್‍ವರೆಗೆ ಬಿ.ಆರ್.ಟಿ.ಎಸ್. ಬಸ್ಸಿನಲ್ಲಿ ಪ್ರಯಾಣಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net