

ವಿಜಯವಾಣಿ ಸುದ್ದಿಜಾಲ ಗದಗ
ಬಸವರಾಜ ಬೊಮ್ಮಾಯಿ ಹಾಗೂ ಪಿ.ಸಿ.ಗದ್ದಿಗೌಡ್ರ ಅವರ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ, ಮತದಾರರಿಗೆ ಬಿಜೆಪಿ ಜಿಲ್ಲಾಧ್ಯ ರಾಜು ಕುರುಡಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಭರದ ಮಧ್ಯೆಯೂ ಹಾವೇರಿ&ಗದಗ ಮತ್ತು ಬಾಗಲಕೋಟೆ ಲೋಕಸಭಾ ೇತ್ರಗಳಲ್ಲಿ ಬಿಜೆಪಿ ಅಭ್ಯಥಿರ್ಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನತೆ ತಮ್ಮ ಪ್ರಜಾಮತ ಶಕ್ತಿಯನ್ನು ಪ್ರದರ್ಶನ ಮಾಡಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿರುವ ಜನತೆಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗದಗ ನಗರದ 35 ವಾರ್ಡ್ಗಳಲ್ಲಿ ಪದ ಸಂಟನೆಗೆ ಬೆನ್ನೆಲಬಾಗಿ ಕಾರ್ಯಕರ್ತರಿಗೆ ಹುಮ್ಮಸ್ಸನ್ನು ತುಂಬಿರುವ ನರಗುಂದ ಶಾಸಕ ಸಿ.ಸಿ.ಪಾಟೀಲ, ಲೋಕಸಭಾ ಸಂಚಾಲಕ ಕಳಕಪ್ಪ ಬಂಡಿ, ವಿ.ಪ. ಸದಸ್ಯ ಎಸ್. ವಿ. ಸಂಕನೂರ, ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ, ಜೆಡಿಎಸ್ ಪದ ಸರ್ವ ಮುಖಂಡರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಗಳ ಎಲ್ಲ ಹಿರಿಯರ ಮಾರ್ಗದರ್ಶನ ಪರಿಶ್ರಮದಿಂದ ಪಕ್ಕೆ ಲೋಕಸಭೆ ಚುನಾವಣೆಯಲ್ಲಿ ಗದಗ ನಗರದಿಂದ 10 ಸಾವಿರ ಮತಗಳ ಅಧಿಕ ಮತಗಳು ಲಭಿಸಿವೆ. ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.