ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ  ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದ ಪೋಸ್ಟರ್  ಬಿಡುಗಡೆಗೊಳಿಸಿದ ಸಚಿವ ಎಚ್.ಕೆ. ಪಾಟೀಲ

WhatsApp Image 2024-09-11 at 7.42.17 PM
Published on

ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಗ್ರಾಮ ಗಂಗೋತ್ರಿ ಸಭಾಂಗಣದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ್ ರವರು ಇದೇ ತಿಂಗಳು ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ  ಜರುಗಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ  ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮದ ಕುರಿತಾದ ಪೋಸ್ಟರ್ ಗಳನ್ನು  ಬಿಡುಗಡೆಗೊಳಿಸಿದರು.

ಎಲ್ಲರೂ ಪ್ರಜಾಪ್ರಭುತ್ವದ ಆಶಯಗಳನ್ನು ಗಟ್ಟಿಗೊಳಿಸಲು ಗದಗ ಜಿಲ್ಲೆಯಲ್ಲಿ ಸುಮಾರು 61 ಕಿಲೋಮೀಟರ್ ಗಳ  ಮಾನವ ಸರಪಳಿಯನ್ನು ಅಂದಾಜು 52 ಸಾವಿರ ಜನರು ಭಾಗವಹಿಸುವುದರ ಮೂಲಕ ಸಂವಿಧಾನ ಪೀಠಿಕೆಯನ್ನು ಓದಿ ರಾಷ್ಟ್ರಗೀತೆಯನ್ನು ಹೇಳಿ ಜೈ ಹಿಂದ್ ಜೈ ಕರ್ನಾಟಕ ಘೋಷಣೆಗಳೊಂದಿಗೆ ಈ ವೈಶಿಷ್ಟ ಪೂರ್ಣವಾದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಪರಿಷತ್ತಿನ ಶಾಸಕ ಎಸ್ ವಿ ಸಂಕನೂರು, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ವಿಶ್ವವಿದ್ಯಾಲಯದ ಕುಲ ಸಚಿವರು ಮತ್ತು ಸಿಬ್ಬಂದಿ ವರ್ಗದವರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net