ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶೋದಾ ಗೋವಿಂದಗೌಡ ಪಾಟೀಲ, ಉಪಸ್ಥಿತರಿದ್ದು ಶುಭಹಾರೈಸಿ ವಿದ್ಯಾವಂತ ಯುವಕರು ಗ್ರಂಥಾಲಯಗಳಲ್ಲಿ ದಿನಪತ್ರಿಕೆ, ಕಾದಂಬರಿ, ಪುಸ್ತಕ, ಸ್ವರ್ಧಾತ್ಮಕ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಬೆಳಸಿಕೊಳ್ಳುತ್ತಿದ್ದರು. ಈಗ ಕಾಲ ಬದಲಾದಂತೆ ಆನ್‌ಲೈನ್ ಮೂಲಕ ವ್ಯಾಸಂಗ ಪುಸ್ತಕಗಳನ್ನು ಕಂಪ್ಯೂಟರ್‌ನಲ್ಲಿ ನೋಡಿ ಕಲಿತುಕೊಳ್ಳುವಂತಾಗಿದೆ. ವಿದ್ಯಾರ್ಥಿಗಳ ಜತೆಗೆ ಇತರರು ಇದನ್ನು ಬಳಸಿಕೊಳ್ಳುವ ಮೂಲಕ ತಮ್ಮ ಜಾನ ಹೆಚ್ಚಿಸಿಕೊಳ್ಳಬೇಕು ಎಂದು ನುಡಿದರು.