ನಗರದ ಜಗದ್ಗುರು ತೋಂಟದಾರ್ಯ ಕಾಲೇಜಿನಲ್ಲಿ ಮಹಾ ಸದಸ್ಯತ್ವ ದಿನದ ಅಂಗವಾಗಿ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿದ ಅವರು ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ಪ್ರಾರಂಭವಾಗಿದೆ ಕಾಲೇಜು ವಿದ್ಯಾರ್ಥಿಗಳು ಎಬಿವಿಪಿ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಉತ್ತಮ ವೇದಿಕೆಯನ್ನು ಎಬಿವಿಪಿ ಕಲ್ಪಿಸಿಕೊಡುತ್ತದೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸದಾ ಧ್ವನಿಯಾಗಿ ಸಮಸ್ಯೆಗಳ ಪರಿಹಾರಕ್ಕೆ ಹಲವಾರು ಹೋರಾಟಗಳನ್ನು ಎಬಿವಿಪಿ ಕಟ್ಟಿದೆ, ಗುಣಮಟ್ಟ ಶಿಕ್ಷಣಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯ, ವಿದ್ಯಾರ್ಥಿ ವೇತನ, ಸಮರ್ಪಕ ಬಸ್ಗಳ ಸೌಲಭ್ಯ, ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯ ಹೀಗೆ ಹಲವಾರು ಸಂದರ್ಭಗಳಲ್ಲಿ ಎಬಿವಿಪಿ ಹೋರಾಟವನ್ನು ಮಾಡಿಕೊಂಡು ಬಂದಿದೆ. ಹೋರಾಟಗಳ ಜೊತೆಗೆ ವಿದ್ಯಾರ್ಥಿಗಳಿಗೆ ಹಲವಾರು ಕಾರ್ಯಕ್ರಮಗಳನ್ನು ದೇಶದ ಹಲವಾರು ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಶಿಬಿರಗಳು, ಉಚಿತ ಸಿಇಟಿ ನೀಟ್ ತರಬೇತಿ ಶಿಬಿರ, ವಿದ್ಯಾರ್ಥಿನಿಯರಿಗೆ ಉಚಿತ ಕರಾಟೆ ತರಬೇತಿ ಶಿಬಿರ ಹೀಗೆ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿ ಪರಿಷತ್ ಮಾಡಿಕೊಂಡು ಬಂದಿದೆ ಎಂದರು.