

ಗದಗ: ಶಿಕ್ಷಣದ ಜೊತೆಜೊತೆಗೆ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಡುವ ಜೀವನದ ಪಾಠವನ್ನು ಕಲಿಸುವ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷö್ಯ ಬೇಡವೆಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅಭಿಪ್ರಾಯಪಟ್ಟರು.
ಅವರು ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಆಯೋಜಿಸಿದ್ದ 2025ನೇ ಸಾಲಿನ ಜಿಲ್ಲಾಮಟ್ಟದ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ವಿವಿಧ ಕ್ಷೇತ್ರಗಳ ಸಾಧಕರು ಸರ್ಕಾರಿ ಶಾಲೆಗಳಲ್ಲಿಯೇ ಓದಿದ್ದು ಎಂಬುದನ್ನು ಯಾರೂ ಮರೆಯಬಾರದು. ಸರ್ಕಾರಿ ಶಾಲೆಗಳು ಇಂದು ಯಾವುದಕ್ಕೂ ಕಡಿಮೆ ಇಲ್ಲದಂತೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂದಿವೆ. ಪ್ರತಿಯೊಬ್ಬ ಕಟ್ಟಕಡೆಯ ಮಗುವಿಗೆ ಶಿಕ್ಷಣ ಸಿಗಬೇಕು ಎಂಬುದನ್ನು ಸರ್ಕಾರದ ಆದ್ಯತೆ. ಅದಕ್ಕಾಗಿ 50ಕ್ಕೂ ಹೆಚ್ಚು ಅಗತ್ಯ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಕೊಡ ಮಾಡುವ ಮೂಲಕ ಜೊತೆಗೆ ಉಚಿತ ಶಿಕ್ಷಣವನ್ನು ಸರ್ಕಾರ ನೀಡುತ್ತಿದೆ. ಇಂಗ್ಲೀಷ್ ಮಾಧ್ಯಮ ಶಾಲೆಗಳ ವ್ಯಾಮೋಹದಲ್ಲಿ ಪಾಲಕರು ದುಬಾರಿ ವೆಚ್ಚ ಮಾಡಿ ವಿದ್ಯಾರ್ಥಿಗಳನ್ನು ಅಲ್ಲಿ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳದೇ ವಂಚಿತರಾಗುತ್ತಿದ್ದಾರೆ. ಮೊದಲು ಇಂಗ್ಲೀಷ್ ಮಾಧ್ಯಮ ವ್ಯಾಮೋಹದಿಂದ ಪಾಲಕರು ಹೊರಬರಲಿ. ಸರ್ಕಾರಿ ಶಾಲೆಗಳು ಇಂದು ಎಲ್ಲ ಮಕ್ಕಳ ಭವಿಷ್ಯ ಕಟ್ಟಲು ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದೆ. ಅದರ ಸದುಪಯೋಗ ಮಾಡಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ವಿನಂತಿಸಿದರು. ವಿದ್ಯಾರ್ಥಿಗಳು ತಮ್ಮ ಸುಂದರವಾದ ಭವಿಷ್ಯವನ್ನು ಕಟ್ಟಿಕೊಳ್ಳಲು ಹಲವಾರು ಸಂಕಲ್ಪಗಳೊAದಿಗೆ ಮೊದಲ ಹೆಜ್ಜೆಯನ್ನು ಶಾಲೆಯತ್ತ ಇಡುವಂತಾಗಲಿ. ವಿದ್ಯಾರ್ಥಿಗಳೇ ತಮಗೆಲ್ಲ ಶುಭವಾಗಲೆಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ ಬಬರ್ಚಿ, ಶಾಲಾ ದತ್ತು ಉಸ್ತುವಾರಿ ಪಡೆದ ಡಾ. ಬಸವರಾಜ ಧಾರವಾಡ, ಡೈಯಟ್‌ನ ಪ್ರಾಚಾರ್ಯ ಜಿ.ಎಲ್. ಬಾರಾಠಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ವಿ. ಶೆಟ್ಟೆಪ್ಪನವರ, ವಿ.ವಿ. ನಡುವಿನಮನಿ, ಉಪನ್ಯಾಸಕ ರವಿ ಪ್ರಕಾಶ, ಶಿಕ್ಷಕರ ಸಂಘಟನೆಯ ಬಿ.ಎಫ್. ಪೂಜಾರ ಮುಂತಾದವರು ಮಾತನಾಡಿ, ವಿದ್ಯಾರ್ಥಿ ಜೀವನದ ಮಹತ್ವ ಕುರಿತು ಸಾಕಷ್ಟು ವಿಷಯಗಳ ಮೇಲೆ ಬೆಳಕು ಚೆಲ್ಲಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀಮತಿ ನಂದಾ ಅಶೋಕ ಖಟವಟೆ, ನಗರಸಭಾ ಸದಸ್ಯಣಿ ವಿದ್ಯಾವತಿ ಗಡಗಿ, ಶಂಕರ ಹಡಗಲಿ, ವಿ.ಎಂ. ಹಿರೇಮಠ, ಮಹೇಶ ಕುಚಬಾಳ, ವಿಜಯ ಕಿರೇಸೂರ, ಬಿ.ಕೆ. ನಿಂಬನಗೌಡ್ರ, ಎಸ್.ಆರ್. ಬಂಡಿ, ಎಫ್.ಸಿ. ಅಬ್ಬಿಗೇರಿ ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷಿö್ಮÃ ಅಣ್ಣಿಗೇರಿ ಸೇರಿದಂತೆ ಶಾಲಾ ಸಿಬ್ಬಂದಿ ಹಾಗೂ ವಿವಿಧ ಶಾಲೆಗಳಿಂದ ಆಗಮಿಸಿದ ಶಿಕ್ಷಕ ವೃಂದ ಭಾಗವಹಿಸಿದ್ದರು. ಎಂ.ಎಚ್. ಕಂಬಳಿ ಸರ್ವರನ್ನೂ ಸ್ವಾಗತಿಸಿದರು. ಬಿ.ಎಸ್. ಯರಗುಡಿ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಆವರಣ ಹಬ್ಬದಂತೆ ಕಂಗೊಳಿಸುತ್ತಿತ್ತು: ವಿವಿಧ ಬಣ್ಣದ ಬಲೂನ್‌ಗಳಿಂದ, ಪರಪರೆಗಳಿಂದ ಹಸಿರು ತೋರಣಗಳಿಂದ ಶೃಂಗಾರಗೊAಡ ಶಾಲೆ ಚಿಣ್ಣರ ಸ್ವಾಗತಕ್ಕೆ ಸಜ್ಜಾಗಿತ್ತು. ಮಕ್ಕಳ ಕಲರವ ಶಾಲೆಯ ತುಂಬೆಲ್ಲ ಝೇಂಕರಿಸಿತ್ತು. ಪ್ರಾರಂಭೋತ್ಸವದ ನಂತರ ಎಲ್ಲ ಮಕ್ಕಳಿಗೂ ಸಿಹಿ ಊಟ ವ್ಯವಸ್ಥೆ ಮಾಡುವುದರ ಮೂಲಕ ಸಂತಸ ಹಂಚಗೊAಡ, ವಿದ್ಯಾರ್ಥಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿತ್ತು.