

ಗದಗ: ಇಂದಿನ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಿದ ಬಳಿಕ ಅವರನ್ನು ಮನೆಯಲ್ಲಿ ಕೂಡ್ರಿಸದೇ ಸಮಾಜದಲ್ಲಿ ಎಲ್ಲರೊಂದಿಗೆ ಬೆರೆಯಲು ಬಿಡಬೇಕು. ಬಸವಣ್ಣನವರ ಕಾಯಕವೇ ಕೈಲಾಸ ಎಂಬ ನಾಣ್ನುಡಿಯಂತೆ ತಮ್ಮ ಮಕ್ಕಳಿಗೆ ಶ್ರಮ ಸಂಸ್ಕೃತಿಯನ್ನು ರೂಢಿಸಬೇಕು ಎಂದು ಶ್ರೀಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಸದಾಶಿವಯ್ಯ ಎಸ್. ಮದರಿಮಠ ಹೇಳಿದರು.
ನಗರದ ಮುಳಗುಂದನಾಕಾ ಬಳಿಯ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವ ಜನರು ವ್ಯಾಪಾರ, ಉದ್ಯೊಗ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಬೇಕು. ಜೊತೆಗೆ ತಮ್ಮ ಪಾಲಕರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಯುವ ಸಮುದಾಯ ಸಮಾಜದ ಮುಂಚೂಣಿಗೆ ಬಂದು ತಾವೂ ಉದ್ಯೋಗ ಮಾಡುವುದರೊಂದಿಗೆ ತಮ್ಮ ಜೊತೆ ಹಲವು ಜನರಿಗಾದರೂ ಉದ್ಯೋಗ ನೀಡುವ ಮೂಲಕ ತಾವೂ ಸಹ ಉದ್ಯೋಗದಾತರಾಗಿ ಸಮಾಜದಲ್ಲಿರುವ ನಿರುದ್ಯೋಗದ ಪೆಡಂಭೂತವನ್ನು ಹೊಡೆದೋಡಿಸಬೇಕು ಎಂದು ಸದಾಶಿವಯ್ಯ ಮದರಿಮಠ ಹೇಳಿದರು.
ಶ್ರೀಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿಗಳಾದ ಮಹೇಶ್ವರÀ ಸ್ವಾಮೀಜಿ ಸಮ್ಮುಖ ವಹಿಸಿದ್ದರು.
ಶ್ರೀಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಎಸ್.ಪಿ. ಸಂಶಿಮಠ, ಅಧ್ಯಕ್ಷರಾದ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ, ಡಾ.ರಾಜಗುರು ಗುರುಸ್ವಾಮಿ ಕಲಕೇರಿ, ಚನ್ನಬಸಯ್ಯ ಶಾಸ್ತಿçಗಳು ಹೇಮಗಿರಿಮಠ, ಪೂಜಾ ಸಮಿತಿ ಅಧ್ಯಕ್ಷರಾದ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ. ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.
ಸಮಾರಂಭದಲ್ಲಿ ವಿವಿಧ ಭಕ್ತಿಸೇವೆ ವಹಿಸಿದ್ದ ಗಣ್ಯರಿಗೆ ಶ್ರೀಗಳಿಂದ ಗುರುರಕ್ಷೆ ನೀಡಲಾಯಿತು.
ಶ್ರೀಮತಿ ಮಂಗಲಾ ಯಾನಮಶೆಟ್ಟಿ ಸ್ವಾಗತಿಸಿದರು. ವಿ.ಎಂ. ಕುಂದಾಳಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಯು.ಅರ್ ಭೂಸನೂರಮಠ ವಂದಿಸಿದರು.