

ವಿಜಯವಾಣಿ ಸುದ್ದಿಜಾಲ ಗದಗ
ಆಶಾ ಕಾರ್ಯಕರ್ತೆಯರನ್ನು ಕೆಲಸಕ್ಕೆ ಸೇರಿಕೊಳ್ಳುವ ಮುನ್ನ ಮೊದಲು ತರಬೇತಿ ನೀಡಿರುತ್ತಾರೆ ನಂತರ ವಿದ್ಯಾರ್ಹತೆ ಎಂಬ ಮಾನದಂಡ ಅನ್ವಯ ಆಗುವಂತೆ ಮಾಡಿ ಕೆಲಸದಿಂದ ವಜಾಗೊಳಿಸಲಾಗುತ್ತಿದೆ. ಯಾವುದೇ ಆಶಾ ಕಾರ್ಯಕರ್ತೆಯರನ್ನು ತೆಗೆದು ಹಾಕದಂತೆ ಹಾಗೂ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ರಾಜ್ಯಾದ್ಯಂತ ಆ. 12, 13, 14 ರಂದು ಮೂರು ದಿನಗಳ ಕಾಲ ಆಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ನಗರದ ಗಾಂಧಿ ವೃತ್ತದಲ್ಲಿ ಅಹೋರಾತ್ರಿ ಧರಣಿ ನಡೆಸಲು ತಿರ್ಮಾನಿಸಲಾಗಿದೆ ಎಂದು ರಾಜ್ಯ ಆಶಾ ಕಾರ್ಯಕರ್ತೆಯರ ಸಂದ ಕಾರ್ಯದಶಿರ್ ಡಿ. ನಾಗಲಕ್ಷಿ$್ಮ್ಮ ಹೇಳಿದರು.
ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು 17 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರೀ ಆರೋಗ್ಯ ಯೋಜನೆಯಡಿಯಲ್ಲಿ ಗ್ರಾಮಿಣ ಭಾಗದಲ್ಲಿ ಸೇವೆ ಮಾಡುತ್ತಿದ್ದೇವೆ. ಆಶಾ ಕಾರ್ಯಕರ್ತೆಯರ ಸೇವೆಯಿಂದ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಶಿಶು ಮರಣ, ತಾಯಿ ಮರಣದ ಪ್ರಮಾಣದಲ್ಲಿ ಗಣನೀಯ ಇಳಿಕೆ ಆಗಿದೆ ಎಂದು ಹೇಳಿದರು.
ಕರೋನಾ ಸಮಯದಲ್ಲಿ ಆಶಾ ಕಾರ್ಯಕರ್ತರು ಯೋಧರಾಗಿ ಕೆಲಸ ಮಾಡಿದ್ದಾರೆ. ಮನೆ-ಮನೆಗೆ ತೇರಳಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಇಂತಹ ಆಶಾ ಕಾರ್ಯಕರ್ತೆಯರ ನೋವನ್ನು ರಾಜ್ಯ ಸರ್ಕಾರ ಕೇಳುತ್ತಿಲ್ಲ. ಸರ್ಕಾರದಿಂದ ಕೇವಲ 5 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಪ್ರೋತ್ಸಾಹ ಧನವನ್ನು 15 ಸಾವಿರಕ್ಕೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತರನ್ನು ಸೇವೆಯಿಂದ ವಜಾಗೊಳಿಸಬಾರದು ಎಂದು ಆಗ್ರಹಿಸಿದರು.
ಜಿಲ್ಲಾ ಗೌರವಾಧ್ಯಕ್ಷ ಸುರೇಶ್ ಜಿ., ಭಾಗ್ಯಜ್ಯೋತಿ, ಲಕ್ಷಿ$್ಮ ಪೂಜಾರ, ಗೌರಮ್ಮ ಕಟ್ಟಿಮನಿ, ಪ್ರೇಮಾ ಪಾಟೀಲ, ರಮಿಜಾ ಹಾವೇರಿ, ಸುಮಂಗಲಾ ತಳವಾರ, ಮಂಜುಳಾ ಹೊಸೂರ, ಅನ್ನರ್ಪೂಣ ಖಾಟವಾ, ಗೀತಾ ಭಜಂತ್ರಿ, ಶಾಹಿನ್ ಅಲ್ಮಾಸ್ ಇತರರಿದ್ದರು.