Gadag: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ.ಡಿ.ಎಸ್ ಕುರ್ತಕೋಟಿ ಮೆಮೋರಿಯಲ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ಗದಗ ಜಿಲ್ಲಾ ಮಟ್ಟದ ವಿವಿಧ ವಿಭಾಗಗಳ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗುಂಪು ಆಟಗಳಾದ ಸೆಟಲ್ ಬ್ಯಾಟ್ಮಿಂಟನ್, ವಾಲಿಬಾಲ್, ಕರಾಟೆ, ತ್ರೋಬಾಲ್, ಟೇಬಲ್ ಟೆನಿಸ್ ಮತ್ತು ಈಜು ಸ್ಪರ್ಧೆಯಲ್ಲಿ ಒಟ್ಟು ಆರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಆರ್ ಆರ್ ಕುಲಕರ್ಣಿ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಉದ್ದೇಶಿಸಿ ಮಾತನಾಡಿ ಕ್ರೀಡೆಯು ದೈಹಿಕ, ಮಾನಸಿಕ, ಮತ್ತು ಸಾಮಾಜಿಕ ಆರೋಗ್ಯಕ್ಕೆ ಅತ್ಯಗತ್ಯ. ಇದು ದೇಹವನ್ನು ಸದೃಢವಾಗಿರಿಸುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ, ಮತ್ತು ತಂಡದ ಕೆಲಸ, ಶಿಸ್ತು, ನಾಯಕತ್ವದಂತಹ ಜೀವನ ಕೌಶಲ್ಯಗಳನ್ನು ಬೆಳೆಸುತ್ತದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ವ್ಯಕ್ತಿಯಲ್ಲಿ ಉತ್ತಮ ನೈತಿಕ ಮೌಲ್ಯಗಳು ರೂಪುಗೊಳ್ಳುತ್ತವೆ, ಇದು ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಹೀಗಾಗಿ ತಮ್ಮ ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ಶ್ರಮ ಪಟ್ಟರೆ ತಮ್ಮ ಆರೋಗ್ಯದೊಂದಿಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ಶ್ರೀ ಆದಿತ್ಯ ಜೋಶಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಲ್ಲ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ ವಿ ಕುಷ್ಟಗಿ, ಚೇರ್ಮನ್ ಶ್ರೀ ಆನಂದ ಪೋತ್ನಿಸ್, ಉಪಾಧ್ಯಕ್ಷರಾದ ಶ್ರೀ ಪಿ.ಆರ್ ಅಡವಿ, ಶ್ರೀ ಜಿ.ವಿ ಬಳಗಾನೂರ, ಕಾರ್ಯದರ್ಶಿಗಳಾದ ಶ್ರೀ ಎ.ಡಿ ಗೊಡಖಿಂಡಿ ಆದರ್ಶ ಶಿಕ್ಷಣ ಸಂಸ್ಥೆಯ ಎಲ್ಲಾ ಗೌರವಾನ್ವಿತ ಪದಾಧಿಕಾರಿಗಳು ಅಂಗ ಸಂಸ್ಥೆಗಳ ಪ್ರಾಚಾರ್ಯರು, ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಲ್ಲಾ ಕ್ರೀಡಾಪಟುಗಳಿಗೆ ದೈಹಿಕ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.