

ಗದಗ: ಶಿಕ್ಷಕರ ಬದುಕು ಆದರ್ಶಮಯವಾಗಿದ್ದು ಉತ್ತಮ ಶಿಕ್ಷಕರು ವಿದ್ಯಾರ್ಥಿಗಳ ಬದುಕಿನ ದಾರಿದೀಪವಾಗಿ ತಾವು ಎಂದೆAದಿಗೂ ಗೌರವ ಪಡೆಯುವವರು. ಬಿ.ಜಿ.ಅಣ್ಣಿಗೇರಿ ಗುರುಗಳ ಶಿಷ್ಯ ಬಳಗವು ಒಳ್ಳೆಯ ಕಾರ್ಯಕ್ಕೆ ಅಡಿ ಇಟ್ಟಿದ್ದು ಇದು ನಿರಂತರವಾಗಿ ಜನಮಾನಸದಲ್ಲಿ ಉಳಿಯುತ್ತದೆ ಎಂದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವ್ಹಿ.ಶೆಟ್ಟೆಪ್ಪನವರ ಹೇಳಿದರು.
ಅವರು ಬುಧವಾರ ಗದುಗಿನ ರಾಜೀವ ಗಾಂಧಿ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸ್.ಎಸ್.ಎಲ್.ಸಿಯಲ್ಲಿ ಮೊದಲ 5 ಸ್ಥಾನಗಳನ್ನು ಪಡೆದುಕೊಂಡ ಗದಗ ತಾಲೂಕಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.
ಉತ್ತಮ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಆತ್ಮೀಯತೆ ಹೊಂದಿ ವಿವಿದ ಬೋಧನಾ ಕೌಶಲ್ಯಗಳನ್ನು ಅಳವಡಿಸಿಕೊಂಡು ಮಕ್ಕಳ ಕಲಿಕೆಯನ್ನು ಅಭಿವೃದ್ಧಿಗೊಳಿಸುವರು. ಇಂದು ಪುರಸ್ಕಾರ ಪಡೆದ ಮಕ್ಕಳು ಪ್ರತಿಭಾನ್ವಿತರಾಗಲು ನಮ್ಮ ಶಿಕ್ಷಕ ಬಳಗ ಹಾಗೂ ಕುಟುಂಬವೂ ಸಹ ಕಾರಣವಾಗಿದ್ದು ಮಕ್ಕಳ ಪ್ರತಿಭೆಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವ ಪ್ರತಿಷ್ಠಾನವನ್ನು ಅಭಿನಂದಿಸಿದರು.
ಇನ್ನೋರ್ವ ಮುಖ್ಯ ಅತಿಥಿ ವೈದ್ಯರಾದ ಡಾ.ರಾಜಶೇಖರ ಪವಾಡಶೆಟ್ಟರ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಕೌಶಲ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಸಂಸ್ಕೃತಿ ಸಂಸ್ಕಾರಗಳನ್ನು ಅಳವಡಿಸಿಕೊಂಡು ಪ್ರಾಮಾಣಿಕತೆಯಿಂದ ಪ್ರಯತ್ನಶೀಲರಾಗಿ ಅಭ್ಯಾಸ ಮಾಡಬೇಕು. ದುಶ್ಚಟಗಳನ್ನು ದೂರವಿಟ್ಟು ನಿರಂತರ ಅಭ್ಯಾಸ ಮಾಡಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದರು.
ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಸರಸ್ವತಿ ವಿಭೂತಿ, ಅಣ್ಣಕ್ಕ ವಿಭೂತಿ, ಮಂಜುಳಾ ಹಡಪದ, ದರ್ಶನ ತಳಗಡೆ, ಯಶೋಧಾ ಢಕ್ಕಣ್ಣವರ ಅವರಿಗೆ ನಗದು ಪುರಸ್ಕಾರದ ಚೆಕ್, ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಅಧ್ಯಕ್ಷತೆಯನ್ನು ಎಸ್.ಬಿ.ಬಾಗೇವಾಡಿ, ಪ್ರತಿಷ್ಠಾನದ ಅಧ್ಯಕ್ಷ ಶಿವಕುಮಾರ ಪಾಟೀಲ ಅವರು ಬಿ.ಜಿ.ಅಣ್ಣಿಗೇರಿ ಅವರ ಬದುಕು, ಸೇವೆಯನ್ನು ಬಣ್ಣಿಸಿ ಪ್ರತಿಷ್ಠಾನದ ಕಾರ್ಯವೈಖರಿಯನ್ನು ವಿವರಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ಸುಭಾಶ್ಚಂದ್ರ ಬೆಟ್ಟದೂರ, ಸಂಯೋಜಕರಾದ ಶ್ರೀಮತಿ ಭಾರತಿ ಶಿವಕುಮಾರ ಪಾಟೀಲ, ನೇಹಾ, ಸುಧಾರಾಣಿ, ಪ್ರಸನ್ ಮುಂತಾದವರಿದ್ದರು. ಎಲ್.ಬಿ.ಕಾಲವಾಡ ಸ್ವಾಗತಿಸಿದರು ವೈ.ಎಸ್.ಬಮ್ಮನಾಳ ನಿರೂಪಿಸಿದರು ಕೊನೆಗೆ ವಿಜಯಲಕ್ಷಿö್ಮÃ ಚೂರಿ ವಂದಿಸಿದರು.