ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ ಮಾತನಾಡಿ ಬರುವ ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಆಡಿಟೋರಿಯಂ ಹಾಲ್‌ದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುವುದು. ಈ ದಿನಾಚರಣೆಯ ಪ್ರಯುಕ್ತ ಪ್ರೌಢಶಾಲಾ, ಕಾಲೇಜು, ಎನ್.ಎಸ್.ಎಸ್, ಎನ್.ಸಿ.ಸಿ. ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ , ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದ್ದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದ ದಿನದಂದು ಬಹುಮಾನ ವಿತರಿಸಲಾಗುವುದು ಎಂದು ಸಭೆಗೆ ವಿವರಿಸಿದರು.