

ಗದಗ: ಬೆಳಗಾವಿಯ ಸಿ.ಪಿ.ಎಡ್. ವೈದಾನದಲ್ಲಿ "ಗಾಂಧಿ ಭಾರತ" ಸ್ಮರಣಾರ್ಥ "ಜೈ ಬಾಪು", ಜೈ ಭೀಮ್" ಮತ್ತು "ಜೈ ಸಂವಿಧಾನ" ಅಭಿಯಾನ ಮುಂದುವರೆಸುವ ಸಲುವಾಗಿ ಜ. 21ರಂದು ಹಮ್ಮಿಕೊಂಡಿರುವ "ಬೃಹತ್ ಕಾಂಗ್ರೆಸ್ ಸಮಾವೇಶ" ಅಂಗವಾಗಿ ನಗರದ ಕಾಟನ್ ಸೆಲ್ ಸೊಸೈಟಿಯಲ್ಲಿ ಜ. 17ರಂದು ಸಂಜೆ 4.30ಕ್ಕೆ ಪೂರ್ವಭಾವಿ ಸಭೆ ಜರುಗಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಜ. 21ರಂದು ಮಂಗಳವಾರ ಸರ್ಕಾರ ವತಿಯಿಂದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಂತರ ನಗರದ ಕ್ಲಬ್ ರಸ್ತೆಯ ಸಿ.ಪಿ.ಎಡ್. ವೈದಾನದಲ್ಲಿ "ಗಾಂಧಿ ಭಾರತ" ಸ್ಮರಣಾರ್ಥ "ಜೈ ಬಾಪು", ಜೈ ಭೀಮ್" ಮತ್ತು "ಜೈ ಸಂವಿಧಾನ" ಅಭಿಯಾನವನ್ನು ಮುಂದುವರೆಸುವ ಸಲುವಾಗಿ "ಬೃಹತ್ ಕಾಂಗ್ರೆಸ್ ಸಮಾವೇಶ" ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಕಾಟನ್ ಸೆಲ್ ಸೊಸೈಟಿಯಲ್ಲಿ ಜ. 17ರಂದು ಸಂಜೆ 4.30ಕ್ಕೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ.ಎಸ್. ಪಾಟೀಲ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಈ ಸಭೆಯಲ್ಲಿ ಕಾನೂನು ಸಂಸದೀಯ ವ್ಯವಹಾರಗಳು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ, ಕೆಪಿಸಿಸಿ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ಗದಗ ಜಿಲ್ಲಾ ಕೆಪಿಸಿಸಿ ವೀಕ್ಷಕರಾದ ಎಮ್.ಬಿ. ಸೌಧಾಗಾರ ಹಾಗೂ ಮೋಹನ್ ಅಸುಂಡಿ ಹಾಗೂ ಐತಿಹಾಸಿಕ ಸಮಾವೇಶವನ್ನು ಯಶಸ್ವಿಗೊಳಿಸಲು ಕಿತ್ತೂರ ಕರ್ನಾಟಕ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿದ ಬಿ.ಜಿ. ಗೋವಿಂದಪ್ಪ, ಟಿ. ರಘುಮೂರ್ತಿ, ಡಾ. ಶ್ರೀನಿವಾಸ್ ಎನ್.ಟಿ. ಹಾಗೂ ಗದಗ ಜಿಲ್ಲೆಯ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಬಿ.ಆರ್. ಯಾವಗಲ್, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಸೇರಿ ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿಗಳು ಹಾಗೂ ಮಾಜಿ ಶಾಸಕರು ಪಾಲ್ಗೊಳ್ಳುವರು. ಕಾರಣ ಗದಗ ಜಿಲ್ಲಾ ಕಾಂಗ್ರೆಸ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾದ ವಿ.ಬಿ. ಸೋಮನಕಟ್ಟಿಮಠ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ವಿನಂತಿಸಿದ್ದಾರೆ