ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಸದಾ ಕೈ ಜೋಡಿಸಿ-ಬುರಡಿ

25GDG01
Published on


ಗದಗ: ಗದಗ-ಬೆಟಗೇರಿ ರೋಟರಿ ಕ್ಲಬ್ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಸದಾ ಕೈ ಜೋಡಿಸುತ್ತಿದ್ದು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗುತ್ತಿರುವುದು ಹೆಮ್ಮಯ ಸಂಗತಿಯೆAದು ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರಡಿ ಹೇಳಿದರು.
ಅವರು ಬೆಟಗೇರಿ ಸರ್ಕಾರಿ ಶಾಲೆ ನಂ. 7ರಲ್ಲಿ ಗದಗ-ಬೆಟಗೇರಿ ರೋಟರಿ ಕ್ಲಬ್‌ದಿಂದ ಮಕ್ಕಳಿಗೆ ನೋಟ್‌ಬುಕ್ ಹಾಗೂ ಪೆನ್ನು ವಿತರಿಸಿ ಮಾತನಾಡಿದರು. ಮಕ್ಕಳು ಓದು-ಬರಹವನ್ನು ನಿಖರವಾಗಿ ರೂಢಿಸಿಕೊಳ್ಳಬೇಕು. ಸ್ಪಷ್ಟ ಓದು, ಶುದ್ದ ಬರಹ, ಸ್ವರಭಾರಯುಕ್ತ ಓದು ಅತೀ ಮುಖ್ಯ ಎಂದರು.
ಗದಗ-ಬೆಟಗೇರಿ ರೋಟರಿ ಕ್ಲಬ್‌ನ್ ಅಧ್ಯಕ್ಷ ಡಾ.ರೇವಣಸಿದ್ದೇಶ್ವರ ಉಪ್ಪಿನ ಮಾತನಾಡಿ ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಾವೆಲ್ಲರೂ ಕೈ ಜೋಡಿಸಬೇಕು. ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ ಎಂದರು.
ಕ್ಲಬ್ ಕಾರ್ಯದರ್ಶಿ ಸಂತೋಷ ಅಕ್ಕಿ ಸ್ವಾಗತಿಸಿದರು. ಅಸಿಸ್ಟೆಂಟ್ ಗವರ್ನರ ಶಿವಾಚಾರ್ಯ ಹೊಸಳ್ಳಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷಯ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net