

ವಿಜಯವಾಣಿ ಸುದ್ದಿಜಾಲ ಗದಗ
ಕಾಂಗ್ರೆಸ್ ಪಕ್ಷದ ಚುನಾವಣಾ ವೆಚ್ಚಕ್ಕೆ ಬಳಕೆ ಮಾಡಿಕೊಂಡಿರುವ ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ. ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಟನಕ ವತಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.
ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಮಾತನಾಡಿ, ಪರಿಶಿಷ್ಟ ಪಂಗಡದ ಅನುದಾನ 187 ಕೋಟಿ ಹಣವನ್ನು ಸಂಶಯಾತ್ಮಕ ಖಾತೆಗೆ ವರ್ಗಾವಣೆ ಮಾಡಿ, ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ಜನರ ದುಡ್ಡನ್ನು ಚುನಾವಣಾ ವೆಚ್ಚಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಜನರಿಗೆ ಮೋಸ ಮಾಡಿದೆ. ಕಾಂಗ್ರೆಸ್ ಸರ್ಕಾರದ ಅವ್ಯವಹಾರದಿಂದ ಮನನೊಂದ ವಾಲ್ಮೀಕಿ ನಿಗಮದ ಅಧಿಕ ಚಂದ್ರಶೇಖರ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಕಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ರಾಜು ಕುರುಡಗಿ ಮಾತನಾಡಿ, ಬಿಜೆಪಿ ಆಡಳಿತ ಅವಧಿಯಲ್ಲಿ ಎಸ್.ಟಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಯೋಜನೆಗಳಿಗೆ ಹಿಂದಿನ ಬಿಜೆಪಿ ಸರ್ಕಾರ 28234 ಕೋಟಿ ಮಿಸಲಿಟ್ಟಿತ್ತು. ಕಾಂಗ್ರೆಸ್ ಸರ್ಕಾರ ಒಂದೇ ವರ್ಷದಲ್ಲಿ ಎಸ್ಟಿ ನಿಗಮಗಳಲ್ಲಿ ಅವ್ಯವಹಾರ ಮಾಡುತ್ತಿದೆ. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಸಚಿವ ನಾಗೇಂದ್ರ ರಾಜೀನಾಮೆ ಪ್ರಕರಣಕ್ಕೆ ಪರಿಹಾರ ಅಲ್ಲ. ರಾಜ್ಯದ ಜನತೆಗೆ ಗ್ಯಾರಂಟಿ ಎಂಬ ನೆಪವೊಡ್ಡಿ ಹಣ ದುರ್ಬಳಕೆ ಮಾಡಿಕೊಳ್ಳವುದಲ್ಲದೇ ವಾಲ್ಮೀಕಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಸಾವಿಗೆ ಕಾರಣ ಕಾಂಗ್ರೆಸ್ ಸರ್ಕಾರ ಕಾರಣ ಆಗಿದೆ. ಬ್ರಷ್ಟರ ರಣೆ, ಪರಿಶಿಷ್ಟ ಪಂಗಡದವರ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿರು,
ಎಸ್.ಟಿ.ಮೋರ್ಚಾ ಜಿಲ್ಲಾಧ್ಯ ಈಶ್ವರಪ್ಪ ರಂಗಪ್ಪನವರ ಮಾತನಾಡಿ, ರಾಜ್ಯದಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿರುವಂತಹ ಕಾಂಗ್ರೆಸ್ ಸರ್ಕಾರ ಈ ಸರ್ವಾಧಿಕಾರಿ ಧೊರಣೆಗೆ ಮುಂಬರುವ ದಿನಗಳಲ್ಲಿ ನಮ್ಮ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದರು.
ಉಮೇಶಗೌಡ ಪಾಟೀಲ, ಲಿಂಗರಾಜ ಪಾಟೀಲ, ಪಕ್ಕಿರೇಶ ರಟ್ಟಿಹಳ್ಳಿ, ಎಂ. ಎಸ್. ಕರೀಗೌಡ್ರ, ಜಗನ್ನಾಥಶಾ ಭಾಂಡಗೆ, ಈಶಪ್ಪ ನಾಯ್ಕರ, ಉಷಾ ಮಹೇಶ ದಾಸರ, ಅನೀಲ ಅಬ್ಬಿಗೇರಿ ಹಲವರು ಇದ್ದರು