

ವಿಜಯವಾಣಿ ಸುದ್ದಿಜಾಲ ಗದಗ
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಟಕವು ಶನಿವಾರ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರು ಮಾತನಾಡಿ, ಸರ್ಕಾರದ ಈ ಕ್ರಮದಿಂದಾಗಿ ಕರ್ನಾಟಕದಲ್ಲಿ 207 ಕೇಂದ್ರಗಳು ಮುಚ್ಚುತ್ತವೆ. ಸರ್ಕಾರ ಔಷಧ ಮಾಫಿಯಾ ಒತ್ತಡಕ್ಕೆ ಮಣಿದಿದೆ. ಸರ್ಕಾರದ ಈ ನಿರ್ಧಾರ ಬಡವರ ವಿರೋಧಿಯಾಗಿದ್ದು, ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಪ್ರಯತ್ನಗಳನ್ನು ಹಾಳು ಮಾಡುತ್ತದೆ. ಈ ನಿರ್ಧಾರವು ರಾಜಕೀಯ ಪ್ರೇರಿತವಾಗಿದ್ದು ಮಾತ್ರವಲ್ಲದೆ, ಬಡವರು ಮತ್ತು ಮಧ್ಯಮ ವರ್ಗದವರಿಗೆ ಆಶಾಕಿರಣವಾಗಿದ್ದ ಸಾರ್ವಜನಿಕ ಆರೋಗ್ಯ ಸೇವೆಯ ಮೇಲಿನ ದಾಳಿಯಾಗಿದೆ ಎಂದ್ಟ್ಠ.
ಜನೌಷಧಿ ಕೇಂದ್ರಗಳು ರೋಗಿಗಳಿಗೆ ವರದಾನವಾಗಿವೆ. ಅವುಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ. ರೋಗಿಗಳಿಗೆ ಉಚಿತವಾಗಿ ಔಷಧಿಗಳನ್ನು ನೀಡಲಾಗುವುದು ಎಂದು ಹೇಳುವ ಮೂಲಕ ಸರ್ಕಾರ ತನ್ನ ನಿರ್ಧಾರವನ್ನು ಸರ್ಮಥಿಸಿಕೊಂಡಿದೆ, ಆದರೆ ಹೊರಗಿನಿಂದ ಔಷಧಿಗಳನ್ನು ಖರೀದಿಸಲು ಪ್ರಿಸ್ಕ್ರಿಪ್ಷನ್ ನೀಡಲಾಗುತ್ತಿದೆ ಮತ್ತು ಔಷಧಿಗಳ ಉಚಿತ ವಿತರಣೆಯ ನೀತಿಗೆ ಇದು ವಿರೋಧವಾಗಿದೆ ಎಂದು ಸಂಕನೂರು ಹೇಳಿದರು.
ಶಾಸಕ ಚಂದ್ರು ಲಮಾಣಿ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿದೆ ಎಂಬ ಸಿಎಂ ಹಾಗೂ ಡಿಸಿಎಂ ಹೇಳಿಕೆಗೆ ಈ ನಿರ್ಧಾರ ವಿರುದ್ಧವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬಡ ವಿರೋಧಿ ಯೋಜನೆಗಳು ಜಾರಿ ಆಗುತ್ತಿವೆ. ಶಾಸಕರು ಹಾರೆ, ಗುದ್ದಲಿಯನ್ನ ತಮ್ಮ ಮನೆಯಲ್ಲಿ ಇಟ್ಟು ಬಿಟ್ಟಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ತಿಂಗಳಿಗೆ ಒಂದು ಗುದ್ದಲಿ ಪೂಜೆ ಆಗುತ್ತಿತ್ತು. ಈಗ ಎರಡು ವರ್ಷದಿಂದ ಏನೂ ಇಲ್ಲ. ಕ್ಷೇತ್ರದ ಅಭಿವೃದ್ಧಿಗೆ ಕಅಂಗ್ರೆಸ್ ಸರ್ಕಾರ ಹಣ ಕೊಡುತ್ತಿಲ್ಲ ಆಡಳಿತ ಪಕ್ಷದ ಶಾಸಕರಿಗೂ ಹಣ ಕೊಡುತ್ತಿಲ್ಲ. ಈ ನಡುವೆ ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಕೈಗೊಂಡಿ ಬಡವರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಎಲ್ಲ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ. ಕಡಿಮೆ ದರದಲ್ಲಿ ಜೆನೆರಿಕ್ ಔಷಧಿಗಳನ್ನು ಒದಗಿಸುವ ಜನೌಷಧಿ ಕೇಂದ್ರಗಳು ಬಡವರಿಗೆ ಹಣ ಉಳಿಸಲು ಸಹಾಯ ಮಾಡುತ್ತವೆ. ಆದರೆ ಜನೌಷಧಿ ಕೇಂದ್ರಗಳನ್ನು ಮುಚ್ಚುವುದರಿಂದ, ರೋಗಿಗಳು ಅವುಗಳನ್ನು ಖಾಸಗಿ ಔಷಧಿಕಾರರಿಂದ ನಿಯಮಿತ ದರದಲ್ಲಿ ಖರೀದಿಸಬೇಕಾಗುತ್ತದೆ. ಇದು ಬಡವರ ಮೇಲೆ ಆಥಿರ್ಕವಾಗಿ ಪರಿಣಾಮ ಬೀರುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶವನ್ನು ಸರ್ಕಾರ ಹಿಂತೆಗೆದು ಕೊಳ್ಳಬೇಕು ಎಂದು ಲಮಾಣೀ ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಎಂ. ಎಂ. ಹಿರೇಮಠ ಮಾತನಾಡಿ, ಜನರಲ್ಲಿ ಕೇಂದ್ರದ ಬಗ್ಗೆ ತಪ್ಪು ಭಾವನೆ ಮೂಡಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಇವರ ಹುಳುಕನ್ನು, ವೈಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡಲಾಗುತ್ತಿದೆ. ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕುತ್ತಿದೆ. ದುಡ್ಡು ಸಿಗುತ್ತದೆ ಅಂದರೆ ರಾಜ್ಯ ಸರ್ಕಾರ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತದೆ. ಒಂದು ಕೈಯಲ್ಲಿ ಕಿತ್ತುಕೊಂಡು ಮತ್ತೊಂದು ಕೈಗೆ ಕೊಡ್ತಿವಿವಿ ಎಂದು ಕಾಂಗ್ರೆಸ್ ಪ್ರತಿನಿಧಿಗಳೇ ಹೇಳಿದ್ದಾರೆ. ಗ್ಯಾರಂಟಿ ಹೊಂದಿಸಲು ಏನೇನು ಕಿತ್ತುಕೊಳ್ಳಬೇಕೋ ಅದನ್ನೆಲ್ಲಾಮಾಡುತ್ತಿದ್ದಾರೆ. ಕಾಂಗ್ರೆಸ್ಸಿನಲ್ಲಿನ ಕೆಲ ಪರಿಣತರು ಅಯೋಗ್ಯ ಉಪಾಯಗಳನ್ನು ನೀಡುತ್ತಿದ್ದು, ಕಾಂಗ್ರೆಸ್ ಅದನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ನಗರಸಭೆ ಸದಸ್ಯ ರಾವೇಂದ್ರ ಯಳವತ್ತಿ ಮಾತನಾಡಿ, ಬಡವರ ಅನುಕೂಲಕ್ಕಾಗಿ ಜನೌಷಧ ಕೇಂದ್ರಗಳನ್ನು ತೆರೆಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿರುವ ಔಷಧಿ ಸ್ಪಾಕ್ ಬಗ್ಗೆ ಪರಿಶೀಲನೆ ನಡೆಸಲಿ. ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡಲಾಗಿದೆ. ಸರ್ಕಾರಿ ವೈದ್ಯರು ಹೊರಗಡೆ ಔಷಧಿ ತೆಗೆದುಕೊಳ್ಳಲು ಬರೆದುಕೊಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಔಷಧಿ ಕೊಡುತ್ತಿಲ್ಲ. ಇದರಿಂದ ಬಡವರಿಗೆ ಅನ್ಯಾಯ ಆಗುತ್ತಿದೆ. ರಾಜ್ಯ ಸರ್ಕಾರ ಕೇಂದ್ರದ ಯೋಜನೆಗಳಿಗೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ರವಿ ದಂನಿನ, ಎಂ.ಎಸ್. ಕರೀಗೌಡ್ರ, ಅನಿಲ ಅಬ್ಬಿಗೇರಿ, ವಿಜಲಕ್ಷಿ$್ಮ ಮಾನ್ವಿ, ಲಿಂಗರಾಜ ಪಾಟೀಲ ಇತರರು ಇದ್ದರು.