ಕಾಲ್ತುಳಿತ ಪ್ರಕರಣ: ಬಿಜೆಪಿ ಜಿಲ್ಲಾ ಟಕದಿಂದ ಪ್ರತಿಭಟನೆ

06GDG01
Published on

ವಿಜಯವಾಣಿ ಸುದ್ದಿಜಾಲ ಗದಗ

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸಿ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಟಕ ಶನಿವಾರ ಮಾನವ ಸರಪಳಿ ನಿಮಿರ್ಸಿ, ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿತು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಹರಿಯಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯಲು ಮುಂದಾದಾಗ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಮುಖ್ಯಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರು ಘಟನೆಯ ಹೊಣೆಗಾರಿಕೆ ಹೊರಲಿ, ಮೃತರ ಕುಟುಂಬಸ್ಥರಿಗೆ ಹಾಗೂ ಗಾಯಾಳುಗಳಿಗೆ ಕೂಡಲೇ ಪರಿಹಾರ ನೀಡಲಿ, ಕರ್ತವ್ಯನಿಷ್ಠ ಪೊಲೀಸರೊಂದಿಗೆ ನಾವಿದ್ದೇವೆ ಎಂಬ ಭಿತ್ತಿಪತ್ರಗಳನ್ನು ಪ್ರದಶಿರ್ಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದರು.

ಮಾಜಿ ಸಚಿವ, ಶಾಸಕ ಸಿ. ಸಿ. ಪಾಟೀಲ ಮಾತನಾಡಿ, ವಿಜಯೋತ್ಸವ ಆಚರಣೆಗೆ ಪೊಲೀಸ್​ ಇಲಾಖೆ ಪರವಾನಗಿ ನೀಡದಿದ್ದರೂ ಒತ್ತಾಯಪೂರ್ವಕವಾಗಿ ಸಂಭ್ರಮಾಚರಣೆ ನಡೆಸಿ 11 ಮಂದಿ ಸಾವಿಗೆ ಕಾರಣರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್​ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ ನೈತಿಕ ಹೊಣೆಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿ.ಸಿ.ಪಾಟೀಲ ಆಗ್ರಹಿಸಿದರು.

ಟನೆಗೆ ಸಂಬಂಧಿಸಿದಂತೆ ಆಗಿರುವ ಎಫ್​ಐಆರ್​ ನಲ್ಲಿ ವಿಜಯೋತ್ಸವಕ್ಕೆ ಅವಕಾಶ ನೀಡದಿರುವುದು ಸ್ಪಷ್ಟವಾಗಿದೆ. ಆದರೂ, ನಿಷ್ಠಾವಂತ ಪೊಲೀಸ್​ ಅಧಿಕಾರಗಳ ತಲೆದಂಡ ಮಾಡಿರುವುದು ಅನ್ಯಾಯ. ಇದು ದಕ್ಷ ಅಧಿಕಾರಿಗಳ ನೈತಿಕ ಸ್ಥೆರ್ಯ ಕುಗ್ಗಿಸಿದೆ. ಬಿಜೆಪಿ ಇದನ್ನು ಉಗ್ರವಾಗಿ ಖಂಡಿಸುವುದರ ಜತೆಗೆ ಪೊಲೀಸರಿಗೆ ಆತ್ಮಸ್ಥೆರ್ಯ ತುಂಬಲು ಇಲಾಖೆ ಬೆನ್ನಿಗೆ ಬಿಜೆಪಿ ನಿಲ್ಲಲಿದೆ ಎಂದರು.

ವಿಜಯೋತ್ಸವ ಕಾರ್ಯಕ್ರಮ ಆಯೋಜಿಸುವ ಅವಶ್ಯಕತೆಯೇ ಇರಲಿಲ್ಲ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ನಾಯಕರು ಮತ್ತು ಅವರ ಸಂಬಂಧಿಕರಿಗೆ ಮಾತ್ರ ಆಹ್ವಾನ ಇತ್ತು. ಅಭಿನಂದನಾ ಕಾರ್ಯಕ್ರಮವನ್ನು ಕಾಂಗ್ರೆಸ್​ ಪಕ್ಷದ ಕುಟುಂಬದ ಕಾರ್ಯಕ್ರಮವನ್ನಾಗಿ ಮಾಡಿದ್ದಾರೆ. ಅಧಿಕಾರಿಗಳು ತುರ್ತು ಕಾರ್ಯಕ್ರಮ ಬೇಡ ಎಂದರೂ ಸಹ ಆಟಗಾರರನ್ನು ಅಭಿನಂದಿಸಲು ಕಾರ್ಯಕ್ರಮ ಮಾಡಿ 11 ಜನರ ಸಾವಿಗೆ ಸರ್ಕಾರ ಕಾರಣ ಆಗಿದೆ. ಬಂದ ಅಭಿಮಾನಿಗಳ ಪೈಕಿ ಕಾಲ್ತುಳಿತಕ್ಕೆ ಸಿಕ್ಕು 11 ಮಂದಿ ಸತ್ತಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಅಶೋಕ ನವಲಗುಂದ, ಬಿಜೆಪಿ ಜಿಲ್ಲಾ ಮಹಿಳಾ ಟಕದ ಅಧ್ಯಕ್ಷೆ ನಿರ್ಮಲಾ ಕೊಳ್ಳಿ ಮಾತನಾಡಿದರು.

ಎಂ. ಎಂ. ಹಿರೇಮಠ, ಲಿಂಗರಾಜ ಪಾಟೀಲ, ಆರ್​. ಕೆ ಚವ್ಹಾಣ, ವಸಂತ ಮೇಟಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ, ಬಿ. ಎಚ್​. ಲದವಾ, ಆನಂದಪ್ಪ ಹಾರೋಗೇರಿ, ಸಂತೋಷ ಅಕ್ಕಿ, ರಾವೇಂದ್ರ ಯಳವತ್ತಿ, ಮಂಜುನಾಥ ಕೋಟ್ನಿಕಲ್​, ವಸಂತ ಪಡಗದ, ಸುರೇಶ ಚಿತ್ತರಗಿ, ವಿದ್ಯಾವತಿ ಗಡಗಿ, ವಿಜಯಲಕ್ಷಿ$್ಮ ಮಾನ್ವಿ, ಸ್ವಾತಿ ಅಕ್ಕಿ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net