

ಗದಗ: ಸಿಬಿಐ ಸ್ವಯಂಪ್ರೇರಿತ ತನಿಖೆ ನಡೆಸಬಹುದೆಂಬ ಅಧಿಕಾರವನ್ನು ರದ್ದು ಮಾಡುವ ಸಂಪುಟದ ನಿರ್ಣಯದ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ-ಯಾಗಿ ವತಿರ್ಸಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣ ಸೇರಿ ಹಗರಣಗಳಿಂದಲೇ ಕೂಡಿದ ಸಿದ್ದರಾಮಯ್ಯನವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿದ್ದರಾಮಯ್ಯನವರು ದೇಶದ ಒಕ್ಕೂಟ ವ್ಯವಸ್ಥೆಗೆ ಭಂಗ ತರುತ್ತಿದ್ದಾರೆ. ಕಾಂಗ್ರೆಸ್ಸಿನ ಇತರ ಹಗರಣಗಳನ್ನು ಗಮನದಲ್ಲಿ ಇಟ್ಟುಕೊಂಡು ಸಿಬಿಐ ಸಂಸ್ಥೆಯನ್ನು ಬ್ಲಾಕ್ ಮಾಡುತ್ತಿರುವ ಹಾಗೆ ಕಾಂಗ್ರೆಸ್ ವತಿರ್ಸುತ್ತಿದೆ, ಕಾಂಗ್ರೆಸ್ ಸರ್ಕಾರದ ನಿರ್ಧಾರ ಸಂರ್ಷಕ್ಕೆ ಎಡೆ ಮಾಡಿಕೊಡುವಂತಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಸಿದ್ದರಾಮಯ್ಯನವರು ವಿಪ ನಾಯಕರಾಗಿ ರಾಜೀನಾಮೆ ಕೇಳಿದ್ದರು. ಎಲ್ಲರಿಗೂ ಒಂದೇ ಕಾನೂನು ಎಂಬುದು ಸಿದ್ದರಾಮಯ್ಯ ಅವರು ತಿಳಿದಿದ್ದು ಈ ರೀತಿ ವತಿರ್ಸುತ್ತಿರುವುದು ಪ್ರಜಾಪ್ರಭುತ್ವದ ಧಕ್ಕೆ ಎಂದು ತಿಳಿಸಿದ್ದಾರೆ.