ಗದಗ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್. ಕೆ. ಪಾಟೀಲರು ಗಣಿಯಲ್ಲಿ ನೋಂದಾಗಿರುವ ಕೇಸ್‌ಗಳ ಬಗ್ಗೆ ಶೇ 90 ಕೇಸ್‌ಗಳು ಇತ್ಯರ್ಥವಾಗಿಲ್ಲ ಎಂದು ಅತ್ಯಂತ ಮಹತ್ವದ ವಿಚಾರ ಹೊರ ತಂದಿದ್ದಾರೆ. ಈಗಲೂ ಅವರದೇ ಸರ್ಕಾರ ಇದೆ. ಅವರದೇ ಸಚಿವ ಸಂಪುಟದ ಸದಸ್ಯರು ಎತ್ತಿರುವ ಪ್ರಕರಣಕ್ಕೆ ಮುಖ್ಯಮಂತ್ರಿಗಳು ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಹೇಳಿದರು.