ಗದಗ: ಹೆಚ್ಚುವರಿ ಬಸ್ಸ್ ಗಳ ವ್ಯವಸ್ಥೆ

IMG-20230328-WA0011
Published on

ಗದಗ: 2024 ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 300 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಅಕ್ಟೋಬರ್ 31 ರಂದು ಗುರುವಾರ ನರಕ ಚತುರ್ದಶಿ, ನವ್ಹೆಂಬರ್ 1 ರಂದು ಶುಕ್ರವಾರ ಕನ್ನಡ ರಾಜ್ಯೋತ್ಸವ, ನವ್ಹೆಂಬರ್ 2 ರಂದು ಶನಿವಾರ ಬಲಿಪಾಡ್ಯಮಿ ಹಾಗೂ ನವ್ಹೆಂಬರ್ 3 ರಂದು ರವಿವಾರ ಇರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿAದ ರಾಜ್ಯ/ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ದಿನಾಂಕ: ಅಕ್ಟೋಬರ್ 29 ರಿಂದ ನವ್ಹೆಂಬರ 1 ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ನವ್ಹೆಂಬರ 3 ಹಾಗೂ ನವ್ಹೆಂಬರ 4 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಸದರಿ ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net