ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನ.08 ರಂದು ಬೆಳಗ್ಗೆ ಕಿತ್ತೂರು ಚೆನ್ನಮ್ಮ ವೃತ್ತದಿಂದ ಮೆರವಣಿಗೆ ಆರಂಭಗೊಳ್ಳುವುದು. ಮೆರವಣಿಗೆಯಲ್ಲಿ ಡಿಜೆ ನಿಷೇಧಿಸಿ, ಗ್ರಾಮೀಣ ಭಾಗದ ಡೊಳ್ಳು, ಕೋಲು ನೃತ್ಯಗಳನ್ನು ಬಳಸಿಕೊಳ್ಳಲಾಗಿದೆ. ಮೆರವಣಿಗೆ ನಂತರ ಮಧ್ಯಾಹ್ನ 3 ಕ್ಕೆ ನಗರದ ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಮಾವೇಶ ನಡೆಸಲಾಗುವುದು. ಬಸನಗೌಡ ಪಾಟೀಲ ಯತ್ನಾಳ, ವಿಜಯಕುಮಾರ ಗಡ್ಡಿ ಸೇರಿದಂತೆ ಕೂಡಲಸಂಗಮ ಶ್ರೀಗಳು, ಹರಿಹರ ಪೀಠದ ಶ್ರೀಗಳು, ಶಾಸಕ ಸಿ.ಸಿ. ಪಾಟೀಲ, ಮಾಜಿ ಸಚಿವ ಕಳಕಪ್ಪ ಬಂಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.