ಮರ್ಚಂಟ್ಸ್ ಅರ್ಬನ್ ಕೋ-ಆಪ್ ಬ್ಯಾಂಕಿನ ಅಧ್ಯಕ್ಷರಾದ ಕೆ. ಎಸ್. ಚಟ್ಟಿ ರವರು ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ ವಾಣಿಜ್ಯ ಬ್ಯಾಂಕುಗಳಿಗೆ ಹೊಲಿಸಿದರೆ, ಪಟ್ಟಣ ಸಹಕಾರ ಬ್ಯಾಂಕುಗಳು ಗಾತ್ರದಲ್ಲಿ ಬಹಳ ಚಿಕ್ಕವು, ವಾಣಿಜ್ಯ ಬ್ಯಾಂಕುಗಳ ಮೇಲೆ ಇರುವಷ್ಟು ನಂಬಿಕೆ ಪಟ್ಟಣ ಸಹಕಾರ ಬ್ಯಾಂಕುಗಳ ಮೇಲೆ ಇರುವುದಿಲ್ಲ. ಅದರಲ್ಲೂ ಸಣ್ಣ ಗಾತ್ರದ ಬ್ಯಾಂಕುಗಳಲ್ಲಿ ಠೇವಣಿ ಹೂಡುವಾಗ ಕೊಡುವ ಬಡ್ಡಿದರ, ನಂಬಿಕೆ ಹೆಚ್ಚು ಕೆಲಸ ಮಾಡುತ್ತದೆ, ನಂಬಿಕೆಯ ಅಸ್ಥಿತ್ವವನ್ನೆ ಅಲ್ಲಾಡಿಸುವ ಘಟನೆಗಳು ನಡೆದಾಗ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿರುವ ಬ್ಯಾಂಕುಗಳ ಮೇಲೆ ಅದರ ಋಣಾತ್ಮಕ ಪರಿಣಾಮ ಆಗುತ್ತದೆ, ಈ ಸಮಸ್ಯೆಗಳ ಕುರಿತು ಗಂಭೀರ ಚಿಂತನೆ ಮಾಡುವುದು ಸಹಕಾರಿಗಳಲ್ಲಿ ಅಗತ್ಯವಿದೆ. ಮಾಧ್ಯಮಗಳಲ್ಲಿ ಸಹಕಾರ ವ್ಯವಸ್ಥೆಯ ಬಗ್ಗೆ ಧನಾತ್ಮಕವಾದ ಪ್ರಚಾರ ವ್ಯವಸ್ಥೆಯಾಗಬೇಕು. ಜನರ ನಂಬಿಕೆ, ಪ್ರೀತಿ, ವಿಶ್ವಾಸ ಈ ಕ್ಷೇತ್ರದ ಬೆಳವಣಿಗೆಗೆ ಪೂರಕವಾದರೆ ಮಾತ್ರ ಪ್ರಗತಿ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಸಹಕಾರ ಯೂನಿಯನ್‌ದ ನಿರ್ದೇಶಕರಾದ ಎಸ್. ಕೆ. ಕುರಡಗಿ ವಹಿಸಿ ಮಾತನಾಡುತ್ತಾ ಜನತೆಗೆ ಬ್ಯಾಂಕುಗಳಿಗೆ ವಿಧಿಸುವ ಆದಾಯ ತೆರಿಗೆಯೂ ಸಹ ಬ್ಯಾಂಕಿನ ಬೆಳವಣಿಗೆಗೆ ಅಡ್ಡಿಯಾಗುತ್ತಿದ್ದು, ಈ ಕುರಿತು ಸಹಕಾರಿಗಳು ಹಾಗೂ ಸರ್ಕಾರ ಚಿಂತನ-ಮAಥನ ನಡೆಸಬೇಕಾಗಿದೆ. ಆದಾಯ ತೆರಿಗೆಯಲ್ಲಿ ಸಹಕಾರ ಬ್ಯಾಂಕುಗಳನ್ನು ಬಂಡವಾಳ ವೆಚ್ಚ, ಜಂಟಿ ಸಾಲ ನೀಡುವಾಗ ಕಾಯ್ದೆಲ್ಲಿರುವ ಅಂಶಗಳಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ಅಗತ್ಯವಿದೆ ಜೊತೆಗೆ ವಿಶೇಷವಾಗಿ ಜಿ.ಎಸ್.ಟಿ. ಬಗ್ಗೆ ಸಮರ್ಪಕವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಆಡಳಿತದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.