ಗದಗ:ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

DC office
Published on
ಗದಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ( ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂಬAಧಿಸಿದAತೆ ಅಕ್ಟೋಬರ್ 26 ಹಾಗೂ ಅಕ್ಟೋಬರ್ 27 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅಕ್ಟೋಬರ್ 26 ರಂದು ಜರುಗುವ ಕಡ್ಡಾಯ ಕನ್ನಡ ಪರೀಕ್ಷೆಯ ದಿನದಂದು ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 1.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಹಾಗೂ ಅಕ್ಟೋಬರ್ 27 ರಂದು ಜರುಗುವ ಸ್ಪರ್ಧಾತ್ಮಕ ಪರೀಕ್ಷೆಯ ದಿನದಂದು ಬೆ 8.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕರ‍್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚುಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್ , ಫೋಟೋ ಕಾಪಿಯರ್‌ಗಳನ್ನು ಬಂದ ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮೊಬೈಲ್ / ಸೆಲ್ಯೂಲಾರ್ ಫೋನ್ , ಟ್ಯಾಬ್ಲೆಟ್  , ಬ್ಲೂ ಟೂಥ್ ಡಿವೈಸ್ , ಸ್ಮಾರ್ಟ ವಾರ್ಚ , ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟಾçನಿಕ್ಸ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್ , ಕೈ ಚೀಲ, ಪರ್ಸ , ನೋಟುಗಳು, ಚಾರ್ಟ, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿರುವ ವಸ್ತç ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೆಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net