ಬಿಜೆಪಿ ಪಕ್ಷದ ಮೇಲೆ ಮತಗಳ್ಳತನ ಆರೋಪ! ಸಹಿಸಂಗ್ರಹ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ

IMG-20250921-WA0007
  ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಎಸ್. ಪಾಟೀಲ ಮಾತನಾಡಿದರು. ಎಚ್.ಕೆ. ಪಾಟೀಲ, ಡಿ.ಆರ್. ಪಾಟೀಲ, ಆಶೋಕ ಮಂದಾಲಿ, ಬಿ.ಬಿ. ಅಸೂಟಿ, ಸಿದ್ದು ಪಾಟೀಲ ಇತರರು ಇದ್ದರು.
Published on
ಗದಗ
ಮತಗಳ್ಳತನದಿಂದ ಬಿಜೆಪಿ  ಅಧಿಕಾರ ಗದ್ದುಗೆಯನ್ನು  ಹಿಡಿದಿದೆ. ಸಹಿ ಸಂಗ್ರಹ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಿದೆ. ರಾಹುಲ್ ಗಾಂಧಿ ಬ್ಲ್ಯಾಕ್ ಬೋರ್ಡ್ ನಲ್ಲಿ ಮಾಹಿತಿ ನೀಡುತ್ತಿದ್ದಂತೆ ಚುನಾವಣಾ ಆಯೋಗಕ್ಕೆ ನಡುಕ ಶುರುವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಮಾತನಾಡುತ್ತಿಲ್ಲ. ಬಿಜೆಪಿ ಮಾತನಾಡುತ್ತಿದೆ ಎಂದು ಎಚ್.ಕೆ. ಪಾಟೀಲ ಹೇಳಿದರು.
ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಶನಿವಾರ ಏರ್ಪಡಿಸಿದ್ದ ಮತಗಳ್ಳತನ ನಿಲ್ಲಿಸಿ, ಸಹಿ ಸಂಗ್ರಹಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ, 2008 ರ ಚುನಾವಣೆಯಲ್ಲಿ ಸೋತಿದ್ದೇವು. ಜನರ ಆಶೀರ್ವಾದಕ್ಕೆ ತಲೆ ಭಾಗಿ ನಡೆದೆವು. ಜನರ ದ್ವನಿಗೆ ತಲೆ ಭಾಗಿದ್ದೇವು. 2013 ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ತಹಶಿಲ್ದಾರ್ ಅವರು ತಪ್ಪು ಮಾಡಿದ್ದರು. 18 ಸಾವಿರ ಮತಗಳನ್ನು ಗದಗ ಮತಕ್ಷೇತ್ರದಲ್ಲಿ ಡಿಲಿಟ್ ಮಾಡಲಾಗಿತ್ತು. ಈ ಬಗ್ಗೆ ನಾನು ದ್ವನಿ ಎತ್ತಿದ್ದೆ. ಇಂತಹ ಮತಗಳ್ಳತನವನ್ನು ರಾಜಕೀಯ ಇತಿಹಾಸದಲ್ಲಿ ನೋಡಿರಲಿಲ್ಲ. ಚುನಾವಣಾ ಮತಪಟ್ಟಿಯನ್ನು ನೋಡಲು ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರನ್ನು ಜಾಗೃತಿ ಮಾಡಿದ್ದು ಸಂತಸದ ವಿಷಯ ಎಂದರು.
ಜಿ.ಎಸ್. ಪಾಟೀಲ ಮಾತನಾಡಿ, ಭಾರತದಲ್ಲಿ
ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು.  ಚುನಾವಣಾ ಸುಧಾರಣಾ ಕ್ರಮದ ಬಗ್ಗೆ 2018 ರಲ್ಲಿ ವಿಧಾನಸಭೆ ಸ್ಪೀಕರ್ ಕಾಗೇರಿ ಚರ್ಚೆ ನಡೆಸಿದ್ದರು. ಚುನಾವಣೆಯಲ್ಲಿನ ದೇಣಿಗೆ, ಇವಿಎಮ್ ನಲ್ಲಿನ ಹ್ಯಾಕಿಂಗ್, ಮತಪಟ್ಟಿಗಳಲ್ಲಿ ತಪ್ಪು ಮಾಹಿತಿ ಬಗ್ಗೆ ಪ್ರಸ್ತಾಪಿಸಲಾಗಿತ್ತು. 19 ಲಕ್ಷ ಇವಿಎಮ್ ಮಷಿನ್ ಕಳ್ಳತನವಾಗಿದೆ ಅಂತ ಚುನಾವಣಾ ಆಯೋಗದಲ್ಲಿ ದಾಖಲಾತಿ ಇದೆ. ಇದರ ಬಗ್ಗೆ ಉತ್ತರಿಸಬೇಕಿದೆ ಎಂದರು.
ಡಿ.ಆರ್. ಪಾಟೀಲ ಮಾತನಾಡಿ,  ರಾಹುಲ್ ಗಾಂಧಿಯವರನ್ನು ಭಯ ಪಡಿಸುವ ಕೆಲಸವನ್ನು ಆಯೋಗ ಮಾಡುತ್ತಿದೆ. ವಿರೋಧ ಪಕ್ಷದ ನಾಯಕ ಪ್ರಶ್ನೆ ಮಾಡಿದರೇ ಅಪಡೆವಿಟ್ ಕೇಳಲಾಗುತ್ತದೆ. ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನ ಸರ್ಕಾರ ಕಪಾಳಮೋಕ್ಷ ಮಾಡಿದೆ. ಹೊಸ ಮತಪಟ್ಟಿ ಮಾಡಲು ನಾವು ಸಿದ್ದತೆ ನಡೆಸಿದ್ದೇವೆ. ಸ್ಥಳಿಯ ಚುನಾವಣೆಗೆ ಇವಿಎಮ್ ಮಷಿನ್ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ನಲ್ಲಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net