ಹೆಂಡತಿ ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ

images (1)
Published on


ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ವಿಧಿಸಿ ತೀರ್ಪು ನೀಡಿದೆ.
2019 ಫೆಬ್ರವರಿ 4 ರಂದು ಹೊಳೆಆಲೂರ ಗ್ರಾಮದ ಲೋಕೇಶ ಕಾಳಿಂಗಪ್ಪ ಮಹಾರಾಜನವರ, ತನ್ನ ಪತ್ನಿ ಲಕ್ಷ್ಮೀಯನ್ನು ಕೊಲೆ ಮಾಡಿದ್ದ. ಮದುವೆಯಾಗಿ 13 ವರ್ಷವಾಗಿ, ಮೂವರು ಮಕ್ಕಳಿದ್ದರೂ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಲೋಕೇಶ, ಕಟ್ಟಿಗೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದ. ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಹೆಣವನ್ನು ರಸ್ತೆ ಪಕ್ಕದಲ್ಲಿ ಎಸೆದು ಹೋಗಿದ್ದ.
ಈ ಬಗ್ಗೆ ರೋಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಪಿಐ ಎಂ.ಐ. ನಡುವಿನಮನಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 11 ಸಾವಿರ ರೂ. ದಂಡ ವಿಧಿಸಿ ನ್ಯಾಯಧೀಶ ಬಸವರಾಜ ಅವರು ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸವಿತಾ ಶಿಗ್ಲಿ ವಾದ ಮಂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net