

ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದ ಜಿಲ್ಲಾಡಳಿತ ಭವನದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ (ಜಿಲ್ಲೆಯಲ್ಲಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ತಲಾ ಮೂರು ಮತಗಟ್ಟೆ ಅಧಿಕಾರಿಗಳಿಗೆ ) ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಶಿರಹಟ್ಟಿ ವಿಧಾನ ಸಭಾ ಕ್ಷೇತ್ರ : ಸೂಗಿಹಾಳ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಶ್ವಿನಿ ಅಮ್ನನವರ , ಬಿಜ್ಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಬಿ.ಜಿ. ಅಂಗಡಿ, ಗೋವನಾಳ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಎಚ್.ಎಸ್.ಮರಿಲಿಂಗನಗೌಡರ,
ಗದಗ ವಿಧಾನ ಸಭಾ ಕ್ಷೇತ್ರ : ಮಲ್ಲಸಮುದ್ರ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರೇಶ್ಮಾ ಮಾಬೂಸಾಬ ಮುಲ್ಲಾನವರ, ಗದಗ ಬೆಟಗೇರಿ ನಗರದ ಎಲೆಕ್ಟಿçಷಿಯನ್ ಶಿರಾಜ್ ಅಹ್ಮದ್ ಎಸ್ ಫಟ್ಟದ್ , ಗದಗನ ಅಂಗನವಾಡಿ ಕಾರ್ಯಕರ್ತೆ ಶ್ರಿಮತಿ ಪರವೀನ್ ಬಾಬು ಎಸ್ ಅತ್ತಾರ,
ರೋಣ ವಿಧಾನಸಭಾ ಕ್ಷೇತ್ರ : ಗಜೇಂದ್ರಗಡ ಸರ್ಕಾರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಶ್ರೀಮತಿ ಎಸ್.ಎಚ್.ಹಲಕುರ್ಕಿ, ಡಂಬಳದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಸ್.ಎಚ್.ಹಿರೇಮಠ, ಬೈರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಶಿಧರ ಆವಾರಿ,
ನರಗುಂದ ವಿಧಾನಸಭಾ ಕ್ಷೇತ್ರ : ಪಾಪನಾಶಿಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಸ್.ಆರ್.ಅಂಗಡಿ, ಬಿ.ಎಸ್.ಬೇಲೇರಿಯ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸರಸ್ವತಿ ಎಮ್ ಹಿರೇಮಠ,ಮದಗುಣಕಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಸ್.ಜಿ. ಮಾಮನಿ,
ಅತ್ಯುತ್ತಮ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಅವರು ಅಭಿನಂದನಾ ಪತ್ರ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದರು.