

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕರೆ
ಗದಗ: ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎಂದು ಕರೆಯುತ್ತಾರೆ. ವ್ಯಕ್ತಿ ಜೀವನದಲ್ಲಿ ನಿಶ್ಚಿತ ಗುರಿ ಸಾಧಿಸಬೇಕಾದರೆ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಇಂದಿನ ಯುವಜನತೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ವ್ಯಸನಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶುಕ್ರವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು , ಗದಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ ಜಗದೀಶ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಶಿಕ್ಷಣ ಇಲಾಖೆಯ ಜಿಲ್ಲಾ ಉಪಸಮನ್ವಯಾಧಿಕಾರಿ ಎಂ.ಎಚ್.ಕಾAಬಳಿ, ವಾರ್ತಾಧಿಕಾರಿ ವಸಂತ ಮಡ್ಲೂರ, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರೌಢಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು. ಪ್ರೊ.ಬಾಹುಬಲಿ ಜೈನರ ಕಾರ್ಯಕ್ರಮ ನಿರ್ವಹಿಸಿದರು.