ಬೆಂಬಲ ಬೆಲೆ ಯೋಜನೆ: ಪ್ರತಿ ಕ್ವಿಂಟಲ್​ ಸಾಮಾನ್ಯ ಭತ್ತಕ್ಕೆ 2,300 ರೂ. ಬೆಲೆ ನಿಗದಿ

08GDG05
Published on

ವಿಜಯವಾಣಿ ಸುದ್ದಿಜಾಲ ಗದಗ

ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎ್​ಎಕ್ಯೂ ಗುಣಮಟ್ಟದ ಭತ್ತ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ಕ್ವಿಂಟಾಲ್​ ಸಾಮಾನ್ಯ ಭತ್ತಕ್ಕೆ 2300 ರೂ, ಗ್ರೇಡ್​ ಎ ಭತ್ತಕ್ಕೆ 2320 ರೂ, ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತಿಚೆಗೆ ಜರುಗಿದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಉತ್ಪನವನ್ನು ಖರೀದಿಸುವ ಕುರಿತು ಜಿಲ್ಲಾ ಟಾಸ್ಕ್​ ೋರ್ಸ ಸಮಿತಿಯ ಅಧ್ಯತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿ ಅನ್ವಯ ನ. 15 ರಿಂದ ನ.31ರ ವರೆಗೆ ಭತ್ತ ಉತ್ಪನ್ನ ಖರೀದಿಗೆ ನೋಂದಣಿ ಅವಧಿಯನ್ನು ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ತೆರೆಯಲಾಗುವ ಭತ್ತ ಉತ್ಪನ್ನ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎ್​ಎಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್​ಗಳನ್ನು ನೇಮಕ ಮಾಡಬೇಕು ಮತ್ತು ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಜಿಲ್ಲೆಯಲ್ಲಿ ಭತ್ತದ ಹಲ್ಲಿಂಗ್​ ಕಾರ್ಯವನ್ನು ಕೈಗೊಳ್ಳಲು ಅಕ್ಕಿ ಗಿರಣಿಗಳು ನೋಂದಾಯಿಸಿ ಕೊಳ್ಳದಿದ್ದಲ್ಲಿ ಜಿಲ್ಲೆಯಲ್ಲಿ ಸಂಗ್ರಹಿಸಿದ ಭತ್ತವನ್ನು ಪಕ್ಕದ ಜಿಲ್ಲೆಯಲ್ಲಿ ನೊಂದಾಯಿತ ಅಕ್ಕಿ ಗಿರಣಿಗಳಿಗೆ ಸಾಗಿಸಿ ಭತ್ತದ ಹಲ್ಲಿಂಗ್​ ಹಾಗೂ ಸಾರವಧಿರ್ತ ಕಾರ್ಯವನ್ನು ಕೈಗೊಳ್ಳಬೇಕು. ಭತ್ತ ಸರಬರಾಜು ಮಾಡಿದ ರೈತರಿಗೆ 15 ದಿನದ ಒಳಗಾಗಿ ಅವರ ಬ್ಯಾಂಕ್​ ಖಾತೆಗೆ ಹಣವನ್ನು ನೇರ ನಗದು ವರ್ಗಾವಣೆ ಮುಖಾಂತರ ಪಾವತಿಸಬೇಕು. ಈ ಬಗ್ಗೆ ಜಂಟಿ ಕೃಷಿ ನಿರ್ದೇಶಕರು ಹಾಗೂ ರಾಜ್ಯ ಸಹಕಾರ ಮಾರಾಟ ಮಂಡಳದ ಜಿಲ್ಲಾ ಶಾಖಾ ವ್ಯವಸ್ಥಾಪಕರು ಕ್ರಮ ವಹಿಸಬೇಕು ಎಂದು ಹೇಳಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್​ ಹೆಗ್ಗಳಗಿ ಮಾತನಾಡಿ, ಎ್​ಎಕ್ಯೂ ಗುಣಮಟ್ಟದ ಭತ್ತ ಹುಟ್ಟುವಳಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿ ಅನ್ವಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿ ಅನ್ವಯ ಮುಂಡರಗಿ ಎಪಿಎಂಸಿ ಪ್ರಾಂಗಣದಲ್ಲಿ ಭತ್ತ ಉತ್ಪನವನ್ನು ಖರೀದಿಸಲು ಖರೀದಿ ಕೇಂದ್ರವನ್ನು ತೆರೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಗಳ ಉಪನಿಬಂಧಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net