ಅಣಕು ಪ್ರದರ್ಶನದ ನೈಜ ವಿವರ: ವೈಮಾನಿಕ ದಾಳಿಯಿಂದ ನಗರದ ಮನೆಗಳಿಗೆ ಬೆಂಕಿ ಹತ್ತಿ ಉರಿದವು ಮನೆಯಲ್ಲಿದ್ದ ಜನರು ಬೆಂಕಿಯಿಂದ ಗಾಯಗೊಂಡರು ದಾಳಿಯಿಂದ ಸುತ್ತಮುತ್ತಲಿನ ಜನರು ಮಕ್ಕಳು ಭಯಭೀತರಾದರು ಕೆಲವರಿಗೆ ಗಂಭೀರ ಗಾಯ ಸಂಭವಿಸಿ ಸ್ಥಳದಲ್ಲಿಯೇ ಮೂರ್ಛೆ ಹೋದರು. ವೈಮಾನಿಕ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ದೌಡಾಯಿಸಿ ಅಗ್ನಿ ನಂದಿಸುವ ಕೆಲಸ ಪ್ರಾರಂಭಿಸಿದರು ,ಅಗ್ನಿ ಸಂಭವಿಸಿದ ಮನೆಯೊಳಗಿದ್ದ ಜನರನ್ನು ಮನೆಯೊಳಗೆ ಹೋಗಿ ಹೋರ ತಂದು ಸಂರಕ್ಷಿಸಿದರು , ತುರ್ತು ಪರಿಸ್ಥಿತಿ ಸಹಾಯವಾಣಿಯನ್ನು ಪ್ರಾರಂಭಿಸಿದರು ,ಅಂಬುಲೆನ್ಸ ಗಳು ಬಂದ ತಕ್ಷಣ ಸ್ಥಳದಲ್ಲಿದ ಪೊಲೀಸ್ ಸಹಾಯದಿಂದ ಗಾಯಾಳುಗಳನ್ನು ಎತ್ತುಗೊಂಡು ಆಸ್ಪತ್ರೆ ಗೆ ಸ್ಥಳಾಂತರಗೊಳಿಸುವ ಕಾರ್ಯ ಪ್ರಾರಂಭಿಸಿದರು. ಜನರಿಗೆ ಪ್ರಥಮ ಚಿಕಿತ್ಸಾ ಕ್ಯಾಂಪ್ಗಳನ್ನು ಪ್ರಾರಂಭವಾಯಿತು, ಸ್ತಳಕ್ಕೆ ದೌಡಾಯಿಸಿದ ರಾಜ್ಯ ವಿಪತ್ತು ಪರಿಹಾರ ತಂಡ , ಎಸ್ಕಾಂ ಎನ್ ಸಿ ಸಿ , ಎನ್ ಎಸ್ ಎಸ್ , ಸ್ಕೌಟ್ಸ್ ಗೈಡ್ಸ ತಂಡದವರು ಪರಿಸ್ಥಿತಿ ನಿರ್ವಹಣೆಯಲ್ಲಿ ಪಾಲ್ಗೊಂಡರು