ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ರಾಷ್ಟç ಭಾರತ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

26GDG02
Published on

ಗದಗ: ಭಾರತವು ಅತ್ಯಂತ ಶ್ರೇಷ್ಠ ಸಂವಿಧಾನ ಹೊಂದಿದ ರಾಷ್ಟçವಾಗಿದೆ. ದೇಶದ ಕಟ್ಟಕಡೆಯ ವ್ಯಕ್ತಿಗೂ ನೆಮ್ಮದಿಯ ಬದುಕು ನೀಡಲು ಸಂವಿಧಾನದಿAದ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.

ಸಂವಿಧಾನ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದರು.

ದೇಶದ ಸಂವಿಧಾನದ ಪೀಠಿಕೆಯಲ್ಲಿ ನಮ್ಮ ದೇಶದ ಪ್ರಜಾಪ್ರಭುತ್ವದ ಹಿರಿಮೆ, ಶಕ್ತಿ ಹಾಗೂ ಅದರ ಶ್ರೇಷ್ಠ ಗುಣಗಳು ಅಡಗಿವೆ. ಸರ್ವಧರ್ಮಗಳಿಗೂ ಸಮಭಾವ ಎಂಬ ಸದಾಶಯ ಸಂವಿದಾನದ ಮುಖ್ಯ ಧ್ಯೇಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅವರು “ ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರಿಕರಿಗೆ ; ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ , ವಿಚಾರ, ಅಭಿವ್ಯಕ್ತಿ , ವಿಶ್ವಾಸ , ಧರ್ಮಶೃದ್ಧೆ ಮತ್ತು ಉಪಾಸನಾ ಸ್ವಾತಂತ್ರö್ಯ : ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟçದ ಏಕತೆಯನ್ನು ಮತ್ತು ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶೃದ್ಧಾ ಪೂರ್ವ ಸಂಕಲ್ಪ ಮಾಡುವ ಕುರಿತು “ ಸಂವಿಧಾನದ ಪೀಠಿಕೆಯನ್ನು ಓದಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು , ಸಮುದಾಯದವರು, ಗಣ್ಯರು, ಸಾರ್ವಜನಿಕರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net