

ಗದಗ: ಜಿಲ್ಲೆಯಲ್ಲಿ ಡಿಸೆಂಬರ್ 7 ಮತ್ತು 8 ರಂದು ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಧಿಸಿದತೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಹಾಗೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಬಂಧಕಾಜ್ಞೆ ಜಾರಿ : ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಡಿಸೆಂಬರ್ 7 ಮತ್ತು 8 ರಂದು ಬೆ 8 ಗಂಟೆಯಿದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತçಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊAದಿಗೆ ಮತ್ತು ಪರೀಕ್ರಾ ಕೊಠಡಿಯ ಸಂವೀಕ್ಷಕರೊAದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.
ವಸ್ತç ಸಂಹಿತೆ : ಶೂ,ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂ ಟೂಥ , ಕ್ಯಾಲ್ಕುಲೇಟರ್ , ವೈಟ್‌ಫ್ಲುಡ್ , ವೈರ್‌ಲೆಸ್ ಸೆಟ್ಸ್ , ಪೇಪರ್ , ಬುಕ್ಸ್ ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬುತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮೆಟಲ್‌ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು.
ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಸ್.ಬಿ.ಸಂಕದ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ , ಪಾರದರ್ಶಕತೆ ಕಾಪಾಡಲು ಪೊಲೀಸ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಸೇರಿದಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು.