ಗದಗ: ಅರ್ಜಿ ಆಹ್ವಾನ

Vijayavani-logo
Published on

ಗದಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಖ್ಖ ಜನಾಂಗದವರಿಗೆ ನಿಗಮದಿಂದ ಎನ್‌ಎಂಡಿಎಫ್‌ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದೇಶಿ ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿಗೆ ಎನ್‌ಎಡಿಎಫ್‌ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತ ದೇಶದ ಪ್ರತಿಷ್ಟಿತ ಐಐಟಿ, ಐಐಎಂಎಸ್, ಐಎಸ್‌ಸಿ, ಸಂಸ್ಥೆಗಳಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ( ಓವರ್ ಸೀಸ್ ಎಜ್ಯುಕೇಷನ್) ಸಾಲ ಯೋಜನೆಯಡಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‌ಸೈಟ್      https://kmdconline.karnataka.gov.in   ಮೂಲಕ ಅರ್ಜಿ ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿರುತ್ತದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮ, ನಿಯಮಿತ ಮೌಲಾನಾ ಆಜಾದ ಅಲ್ಪಸಂಖ್ಯಾತರ ಭವನ 1 ನೇ ಮಹಡಿ , ಜಿಲ್ಲಾ ನ್ಯಾಯಾಲಯದ ಎದುರುಗಡೆ, ಹುಬ್ಬಳ್ಳಿ ರಸ್ತೆ, ಗದಗ ಈ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08372-295147 ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net