

ಗದಗ: 2024-25 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ 10 ತಿಂಗಳ ವಸತಿ ಸಹಿತ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಗಸ್ಟ 31 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990 ಕರೆ ಮಾಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ