

ಗದಗ: ಕಾಯಕ ಮತ್ತು ದಾಸೋಹದ ಮೂಲಕ ಸಮಾಜಕ್ಕೆ ಬೆಳಕು ನೀಡಿದವರಲ್ಲಿ ಶರಣ ಶ್ರೀ ನುಲಿಯ ಚಂದಯ್ಯನವರೂ ಒಬ್ಬರು. ಕಾಯಕವೇ ಲಿಂಗ ಪೂಜೆ ಎಂದು ಸಾರಿದ ಇವರು ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯವನ್ನು ಶ್ರದ್ದೆಯಿಂದ ಮಾಡಬೇಕು ಎಂದು ತಮ್ಮ ವಚನಗಳ ಮೂಲಕ ಸಮಾಜಕ್ಕೆ ಸಂದೇಶ ನೀಡಿದ್ದಾರೆ ಎಂದು ರಾಜ್ಯದ ಕಾನೂನು, ನ್ಯಾಯ , ಮಾನವ ಹಕ್ಕುಗಳು , ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.