ಶನಲ್ ಎಲ್‌ಜಿಬಿಲೀಟಿ ಕಮ್ ಎನಟ್ರೆನ್ಸ ಟೇಸ್ಟ: ಪ್ರತಿಬಂಧಕಾಜ್ಞೆ ಜಾರಿ

Dc sir photo
Published on
ಗದಗ: ವೈದ್ಯಕೀಯ ಕೋರ್ಸಗಳ ಪ್ರವೇಶಕ್ಕಾಗಿ ನ್ಯಾಶನಲ್ ಎಲ್‌ಜಿಬಿಲೀಟಿ ಕಮ್ ಎನಟ್ರೆನ್ಸ ಟೇಸ್ಟ (ಯು ಜಿ) 2025 ಪರಿಕ್ಷೇಗಳು ಮೇ 04 ರಂದು ಮಧ್ಯಾಹ್ನ 2 ಘಂಟೆಯಿದ ಸಾಯಾಂಕಾಲ 5 ಘಂಟೆವರೆಗೆ ನಡೆಯಲಿದೆ. ಸದರಿ ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಗದಗ ಜಿಲ್ಲೆಯಲ್ಲಿ ಒಟ್ಟು 05 ಪರೀಕ್ಷಾ ಕೇಂದ್ರಗಳ ಸುತ್ತಲೂ ಮೇ 4 ರ ಬೆಳಿಗ್ಗೆ 10 ಗಂಟೆಯಿAದ ಮಧ್ಯರಾತ್ರಿ 12 ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ, ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ ಅಂಗಡಿ, ಬುಕ್‌ಸ್ಟಾಲ್, ಫೋಟೋ ಕಾಪಿರ‍್ಗಳನ್ನು ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ , ಸೇರಿದಂತೆ ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಹಾಗೂ ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ , ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿ.ಎನ್, ಶ್ರೀಧರ ಅವರು ಆದೇಶಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net