

ಬೆಳೆ ಹಾನಿ ಸಮೀಕ್ಷೆ ಕಾರ್ಯ ನಿಖರವಾಗಿರಲಿ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಗದಗ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್,ಹಾಗೂ ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ಬಿ.ಎಸ್.ನೇಮಗೌಡ ಅವರು ಅತಿಯಾದ ಮಳೆಯಿಂದ ಆದ ಬೆಳೆ ಹಾನಿ ಪ್ರದೇಶ ವೀಕ್ಷಣೆಗೆ ಗದಗ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.