

ವಿಜಯವಾಣಿ ಸುದ್ದಿಜಾಲ ಗದಗ
ಸರ್ಕಾರಿ ಶಾಲೆಯ ವಿದ್ಯಾಥಿರ್ಗಳಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುವ ಮೂಲಕ ವಿದ್ಯಾಥಿರ್ಗಳ ಶ್ರೇಯೋಭಿವೃದ್ಧಿ ಹಾಗೂ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಿದೆ. ವಿದ್ಯಾಥಿರ್ಗಳು ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಆರ್. ಎಸ್. ಬುರಡಿ ಹೇಳಿದರು.
ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಿ.ಜಿ.ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನದಿಂದ ಎಸೆಸೆಲ್ಸಿಯಲ್ಲಿ ಮೊದಲ 5 ಸ್ಥಾನ ಪಡೆದುಕೊಂಡ ತಾಲೂಕಿನ ಸರ್ಕಾರಿ ಪ್ರೌಢ ಶಾಲಾ ವಿದ್ಯಾಥಿರ್ಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾಥಿರ್ಗಳು ಸಮಯ ವ್ಯರ್ಥ ಮಾಡುವದು, ದುಶ್ಚಟಗಳನ್ನು ರೂಢೀಸಿಕೊಳ್ಳುವದು ಆಗಬಾರದು. ಟಿವಿ ಮತ್ತು ಮೊಬೈಲ್ಗಳನ್ನು ಅಗತ್ಯವಿದ್ದರೆ ಮಾತ್ರ ಬಳಕೆ ಮಾಡಬೇಕು. ಜ್ಞಾನಾರ್ಜನೆಗೆ ಸಂಪರ್ಕಕ್ಕೆ ಅಗತ್ಯಕ್ಕೆ ತಕ್ಕಂತೆ ಉಪಯೋಗಿಸಬೇಕು ಎಂದರು.
ಶಾಲೆಯ ಪ್ರತಿಭಾನ್ವಿತ ವಿದ್ಯಾಥಿರ್ಗಳಾದ ಸ್ಪೂತಿರ್ ಉಡಚಗೊಂಡ, ಲಕ್ಷಿ$್ಮ ನಲುಡಿ, ಕೀತಿರ್ ನಾಯ್ಕರ್, ಶಾಕಾಂಬರಿ ನರೇಗಲ್ಲ, ಜ್ಯೋತಿ ಹೇಮಾದ್ರಿ ಅವರಿಗೆ ಪ್ರತಿಭಾ ಪುರಸ್ಕಾರದ ಚೆಕ್ಕು, ಪ್ರಮಾಣ ಪತ್ರ, ಕಾಲೇಜ್ ಬ್ಯಾಗ್ಗಳನ್ನು ನೀಡಿ ಶಾಲೆಯ ಎಲ್ಲ ಮಕ್ಕಳಿಗೆ ಸಿಹಿ ವಿತರಿಸಿ ಶುಭ ಕೋರಲಾಯಿತು.
ಇದೇ ಸಂದರ್ಭದಲ್ಲಿ ನಗರದ ಹಳೇ ಬಸ್ ನಿಲ್ದಾಣದ ಬಳಿ ಇರುವ ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾಥಿರ್ಗಳಿಗೆ ಪ್ರತಿಭಾ ಪುರಸ್ಕಾರದ ಚೆಕ್ಕು, ಪ್ರಮಾಣ ಪತ್ರ, ಕಾಲೇಜ್ ಬ್ಯಾಗ್ಗಳನ್ನು ನೀಡಿ ಗೌರವಿಸಲಾಯಿತು.
ಪ್ರತಿಷ್ಠಾನದ ಅಧ್ಯ ಶಿವಕುಮಾರ ಎಚ್.ಪಾಟೀಲ ಅವರು ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳನ್ನು ವಿವರಿಸಿದರು. ಜೆ.ಬಿ.ಅಣ್ಣಿಗೇರಿ, ಪ್ರತಿಷ್ಠಾನದ ಕಾರ್ಯದಶಿರ್ ಸುಭಾಸಚಂದ್ರ ಬೆಟದೂರ, ಖಜಾಂಚಿ ವಿಜಯಲಕ್ಷಿ$್ಮ ಅಂಗಡಿ, ನಿರ್ದೆಶಕ ಡಾ.ಶರಣಬಸವ ಚೌಕಿಮಠ, ಡಾ.ಬಸಯ್ಯ ಬೆಳ್ಳೇರಿಮಠ, ಶಿವಪ್ಪ ಕತ್ತಿ, ಆಂಜನೇಯ ಕಟಗಿ, ಸಿದ್ಧಲಿಂಗನಗೌಡ ಪಾಟೀಲ, ಡಾ.ಬಸವರಾಜ ಚನ್ನಪ್ಪಗೌಡ್ರ, ಭಾರತಿ ಪಾಟೀಲ, ನೇಹಾ, ಸುಧಾರಾಣಿ, ಪ್ರಸನ್ಕುಮಾರ ಗುತ್ತಿ ಸೇರಿದಂತೆ ಇತರರಿದ್ದರು.