ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಂ ಎಂ ತುಂಬರಮಟ್ಟಿ ಮಾತನಾಡಿ, ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವದು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಬಸವರಾಜ ಬಳ್ಳಾರಿ ಮಾತನಾಡಿ ಜಿಲ್ಲೆಯಲ್ಲಿ ಇರುವಂತಹ ವಸತಿ ನಿಲಯಗಳಲ್ಲಿ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ರಸಪ್ರಶ್ನೆ, ರಂಗೋಲಿ ಸ್ಪರ್ಧೆ, ಮತ್ತು ಇಂಡೋರ್ ಗೇಮ್ಸ್ ನಡೆಸಿಕೊಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಪಂ ಸಿಇಓ ಭರತ್.ಎಸ್., ಪಕೀರಪ್ಪ ಹೆಬಸೂರು, ಆರ್. ಡಿ. ಕಡ್ಲಿಕೊಪ್ಪ, ಎಸ್. ಮಲ್ಲಿಕಾರ್ಜುನ, ರುದ್ರಣ್ಣ ಗುಳಗುಳಿ, ಹರೀಶ್ ಪೂಜಾರ್, ಮೋಹನ್ ಚಂದಪ್ಪನವರ್, ಶಿವಪ್ಪ ಮಡಿವಾಳ, ಧಾಮಣ್ಣ ಮಡಿವಾಳರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.