ಜಿಲ್ಲೆಯಲ್ಲಿ 3740 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥ

Published on
ಲೋಕ ಅದಾಲತ್ ನಲ್ಲಿ 4 ದಂಪತಿಗಳ ಪುನರ್ಮಿಲನ
ಗದಗ: ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ, ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ರಾಜ್ಯಾದ್ಯಂತ ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು.
ಗದಗ ಜಿಲ್ಲೆಯಲ್ಲಿ ಸೆಪ್ಟಂಬರ್ 13 ಶನಿವಾರ ದಂದು ರಾಷ್ಟಿçÃಯ ಲೋಕ ಅದಾಲತನಲ್ಲಿ ಎಲ್ಲಾ ತಾಲೂಕಗಳ ನ್ಯಾಯಾಧೀಶರು ಹಾಗೂ ವಕೀಲ ವೃಂದದವರು, ಸಿಬ್ಬಂದಿವರ್ಗ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ¨ÀsÆ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಆಯಾ ತಾಲೂಕಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ದಲ್ಲಿ ಪಾಲ್ಗೊಂಡು ರಾಜೀ ಸಂಧಾನಗೊಳಿಸಿದರು.
ಜಿಲ್ಲೆಯಲ್ಲಿ ಒಟ್ಟು 13 ಬೆಂಚ್‌ಗಳನ್ನು ರಚಿಸಿ ರಾಜೀ ಸಂಧಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ ನ್ಯಾಯಾಲಯದಲ್ಲಿರುವ 3740 ಚಾಲ್ತಿ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದೆ ಹಾಗೂ 28486 ವ್ಯಾಜ್ಯ ಪೂರ್ವ ¥್ರÀಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು 32226 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಇತ್ಯರ್ಥಗೊಂಡ ಪ್ರಕರಣಗಳಲ್ಲಿ 7 ಮೋಟಾರು ವಾಹನ ಅಪಘಾತ ಪ್ರಕರಣಗಳು, 72 ಚೆಕ್‌ಬೌನ್ಸ್ ಪ್ರಕರಣಗಳು, 55 ಕ್ರಿಮಿನಲ್ ಕಂಪೌAಡೆಬಲ್ ಪ್ರಕರಣಗಳು, 17 ಅಸಲುದಾವೆ ಪ್ರಕರಣಗಳು, 27 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 5 ವÊವಾಹಿಕ ಪ್ರಕರಣಗಳು, 45 ವಿದ್ಯುತ್ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 3740 ಚಾಲ್ತಿ ಪ್ರಕರಣಗಳನ್ನು ಒಟ್ಟು ರೂ.101770828, ಗಳಿಗೆ ಪರಿಹಾರ ಒದಗಿಸುವುದರ ಮೂಲಕ ರಾಜೀ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗಿದೆ.
ವ್ಯಾಜ್ಯಪೂರ್ವ ಪ್ರಕರಣಗಳಿಗೆ ಸಂಬAಧಿಸಿದAತೆ 149 ವಿವಿದs ಬ್ಯಾಂಕ್ ಪ್ರಕರಣಗಳು, 18 ಕಂದಾಯ ಅದಾಲತ್ ಪ್ರಕರಣಗಳು ಸೇರಿದಂತೆ ಒಟ್ಟು 28486 ವ್ಯಾಜ್ಯ ಪೂರ್ವ ಪ್ರಕರಣಗಳು ರೂ.35217499- ಗಳಿಗೆ ರಾಜೀ ಸಂಧಾನವಾಗಿದೆ.
ವಿಶೇಷವಾಗಿ ಗದುಗಿನ 1 ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ 1 ಪ್ರಕರಣದಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಹಾರ ಬದಲಾಯಿಸಿ ಅವರಿಗೆ ಸಿಹಿ ಹಂಚಿ ಕಳುಹಿಸಿ ಕೊಡಲಾಯಿತು .ಪ್ರಧಾನ ಹಿರಿಯ ದಿವಣಿ ನ್ಯಾಯಾಲಯ & ಸಿಜೆಎಂ 2, ಲಕ್ಷೆö್ಮÃಶ್ವರ ದಲ್ಲಿ 1 ಜೋಡಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಸಿಹಿ ಹಂಚಿ ಕಳುಹಿಸಿ ಕೊಡಲಾಯಿತು. ಒಟ್ಟು4 ಜೋಡಿಗಳು ಈ ರಾಷ್ಟಿçÃಯ ಲೋಕ ಅದಾಲತದಲ್ಲಿ ಪುನಃ ಒಂದುಗೂಡಿ ಹೋಗಿದ್ದು ವಿಶೇಷವಾಗಿದೆ.
ರಾಷ್ಟಿçÃಯ ಲೋಕ ಅದಾಲತ್‌ಗೆ ಸಹಕಾರ ನೀಡಿದ ವಕೀಲ ವೃಂದದವರಿಗೆ, ಪಕ್ಷಗಾರರಿಗೆ, ಜಿಲ್ಲೆಯಎಲ್ಲಾ ನ್ಯಾಯಾಧೀಶರಿಗೆ, ಸಿಬ್ಬಂದಿವರ್ಗದವರಿಗೆ, ಜಿಲ್ಲಾ ನ್ಯಾಯಾಲಯದ ತಾಂತ್ರಿಕ ಸಿಬ್ಬಂದಿ ವರ್ಗದವರಿಗೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಸರ್ಕಾರಿ ವಕೀಲರಿಗೆ, ಅಪರಜಿಲ್ಲಾ ಸರ್ಕಾರಿ ವಕೀಲರಿಗೆ, ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅದs್ಯಕ್ಷರು ಹಾಗೂ ಸದಸ್ಯರುಗಳಿಗೆ, ಅಭಿಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಗಣಿ ಮತ್ತು ¨ÀsÆ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ, ವಿಮೆ ಕಂಪನಿಯವರಿಗೆ, ಉಪ ವಿಭಾಗಾಧಿಕಾರಿ ಗಳಿಗೆ, ಗದಗ ಬೆಟಗೇರಿ ನಗರಸಭೆ, ನಗರ ಯೋಜನಾ ಕೋಶ, ಬಿಎಸ್‌ಎನ್‌ಎಲ್, ಅಬಕಾರಿ ಇಲಾಖೆ, ಬ್ಯಾಂಕ್, ವಾರ್ತಾ ಇಲಾಖೆಯವರಿಗೆ ಹಾಗೂ ಎಲ್ಲಾ ಮಾದs್ಯಮ ದವರಿಗೆ, ಲೋಕ ಅದಾಲತ್‌ಗೆ ಸಹಕಾರ ನೀಡಿದ ಎಲ್ಲರಿಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರು ದsನ್ಯವಾದಗಳನ್ನು ಅರ್ಪಿಸಿದ್ದಾರೆ.
ಮತ್ತು ನಗರದಲ್ಲಿ ಜರುಗಿದ  ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅದs್ಯಕ್ಷರಾದ ನಾಗವೇಣಿ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಧ ಗಂಗಾಧರ ಸಿ.ಎಂ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ವ ಸಿಜೆಎಂ ಜಿ.ಆರ್. ಶೆಟ್ಟರ, ಜೆಎಂಎಫ್‌ಸಿ 1 ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಶಿಲ್ಪಾ ತಿಮ್ಮಾಪುರ, ಜೆಎಂಎಫ್‌ಸಿ 2 ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ ಅವರು ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ಕಲ್ಲೂರ, ಉಪಾದs್ಯಕ್ಷರಾದ ಎಂ.ಎ ಸಂಗನಾಳ ಹಾಗೂ ಪದಾಧಿಕಾರಿಗಳು, ಸರ್ಕಾರಿ ಅಭಿಯೋಜಕರಾದ ಸವಿತಾ ಎಂ.ಶಿಗ್ಲಿ, ಜಿಲ್ಲಾ ಸರ್ಕಾರಿ ವಕೀಲರಾದ ಎಂ.ಎA.ಕುಕನೂರ, ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಜಿ.ಬಿ. ನೀಲರಡ್ಡಿ ಹಾಗೂ ವಕೀಲ ವೃಂದದವರು, ಸಂಧಾನಕಾರ ವಕೀಲರು, ಪಕ್ಷಗಾರರು ಹಾಗೂ ಎಲ್ಲಾ ನ್ಯಾಯಾಲಯಗಳ ಸಿಬ್ಬಂದಿವರ್ಗ ಉಪಸ್ಥಿತರಿದ್ದÄ ಲೋಕ ಅದಾಲತ್ ಯಶಸ್ವಿಗೊಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net