ಗಜೇಂದ್ರಗಡ: ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 4ರ ದೈಹಿಕ ಶಿಕ್ಷಣ ಶಿಕ್ಷಕಿ ರೇಣುಕಾ ಸೋಮೇಶ ಇಟಗಿ ಅವರಿಗೆ 2023- 24ನೇ ಸಾಲಿನ ಗದಗ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.
ಸೆ. 5ರಂದು ಗದಗನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.