ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

H K Patil photo
Published on

ಗದಗ: ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮರಾಜ್ಯದ ಕಾನೂನು , ನ್ಯಾಯ , ಮಾನವ ಹಕ್ಕುಗಳು , ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಅಗಸ್ಟ 9 ಹಾಗೂ 10 ರಂದು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು ವಿವರ ಇಂತಿದೆ. ಅಗಸ್ಟ 9 ರಂದು ಬೆಳಿಗ್ಗೆ 6.30 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 7.30 ಗದುಗಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಶ್ರೀ ನುಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12 ಗಂಟೆಗೆ ಬೆಟಗೇರಿ ಪಶುಆಸ್ಪತ್ರೆ - ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಮುಳಗುಂದ ದಾವಲಮಲಿಕ ಪಹಾಡದಲ್ಲಿ ಶಾಲಾ ಕೊಠಡಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗದಗನಲ್ಲಿ ವಾಸ್ತವ್ಯ ಮಾಡುವರು.

ಅಗಸ್ಟ 10 ರಂದು ಬೆಳಿಗ್ಗೆ 10 ಗಂಟೆಗೆ ಗದಗ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದುಂಡಪ್ಪ ಮಾನ್ವಿ ಮಹಿಳಾ ಮತ್ತುಮಕ್ಕಳ ಆಸ್ಪತ್ರೆ ಹಾಗೂ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ ಕುಂದುಕೊರತೆ ಸಭೆ ಜರುಗಿಸುವರು. ಮಧ್ಯಾಹ್ನ 12.30 ಗಂಟೆಗೆ ನಾಗಾವಿ ತಾಂಡಾದಲ್ಲಿ ನಾಗದೇವತೆ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 9 ಗಂಟೆಗೆ ಗದಗ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net