ಉದ್ಯೋಗದಲ್ಲಿ ಕನ್ನಡ ಮಾಧ್ಯಮ ಕೃಪಾಂಕ ನೀಡಲು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು: ಎಚ್.ಕೆ. ಪಾಟೀಲ

IMG-20250120-WA0007
Published on

* ಉದ್ಯೋಗದಲ್ಲಿ ಗ್ರಾಮೀಣ ಕೃಪಾಂಕದಂತೆ ಕನ್ನಡ ಮಾಧ್ಯಮ ಕೃಪಾಂಕ ನೀಡುವ ಕುರಿತು ನಿರ್ಣಯ ಕೈಗೊಂಡರೆ ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು: ಎಚ್.ಕೆ. ಪಾಟೀಲ

ವಿಜಯವಾಣಿ ಸುದ್ದಿಜಾಲ ಗದಗ

ಆಂಗ್ಲಭಾಷಾ ಪ್ರಭಾವದಲ್ಲಿ ಕನ್ನಡ ಭಾಷೆ ಸಮಸ್ಯೆ ಎದುರಿಸುತ್ತಿದೆ. ಇಂತಹ ಸವಾಲುಗಳ ನಡುವೆ ಕನ್ನಡ ಭಾಷೆ ಅಭಿವೃದ್ಧಿಗೆ, ಪರಿಹಾರ ಕಂಡುಕೊಳ್ಳುವ ಅಗತ್ಯೆತೆ ಇದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ 10 ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗದಲ್ಲಿ ರಾಜ್ಯದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ನಿಯಮದಂತೆ ಕನ್ನಡಭಾಷೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಕೃಪಾಂಕ ನೀಡುವ ಕುರಿತು ಶಾಸಕ ಜಿ.ಎಸ್. ಪಾಟೀಲ ನೇತೃತ್ವದಲ್ಲಿ ನಿರ್ಣಯ ಕೈಗೊಂಡ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರೆ, ಸರ್ಕಾರದ ಮಟ್ಟದಲ್ಲಿ ಸಾಧಕ ಬಾಧಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು

ಸಿದ್ಧರಾಮ ಶ್ರೀಗಳು, ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಎಸ್.ಎಸ್. ಪಾಟೀಲ, ಮಿಥುನ್ ಪಾಟೀಲ, ಡಿ.ಆರ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ವಿವೇಕಾನಂದಗೌಡ ಪಾಟೀಲ,

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net