ಶಿವಪ್ರೀಯಾನಂದ ಸ್ವಾಮಿಗಳ ಪುರಪ್ರವೇಶ

IMG-20250526-WA0054
Published on
ವಿಜಯವಾಣಿ ಸುದ್ದಿಜಾಲ ಗದಗ
ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ, ಸನ್ಯಾನ ಸ್ವೀಕರಿಸಿ ಜನಸೇವೆಗೆ ಮುಂದಾಗುತ್ತಿರುವ ಶ್ರೀ ಶಿವಪ್ರೀಯಾನಂದ ಸ್ವಾಮಿಗಳು ಪುರಪ್ರವೇಶ ಸಮಾರಂಭ ಇಲ್ಲಿನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಮೇ 27ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮಾಜಿ ಶಾಸಕ ಡಿ.ಆರ್ . ಪಾಟೀಲ ತಿಳಿಸಿದರು.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತೋಂಟದ ಸಿದ್ಧರಾಮ ಸ್ವಾಮೀಜಿ, ಅಭಿನವ ಶಿವಾನಂದ ಸ್ವಾಮೀಜಿ, ನಿರ್ಭಯಾನಂದ ಸರಸ್ವತಿ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಕಾನೂನು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ .ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೋಣ ಶಾಸಕ ಜಿ.ಎಸ್ . ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್ .ವಿ. ಸಂಕನೂರ, ಮಾಜಿ ಶಾಸಕರಾದ ಬಿ.ಆರ್ . ಯಾವಗಲ್ , ಜಿ.ಎಸ್ . ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಬಿ.ಬಿ. ಅಸೂಟಿ, ಅಶೋಕ ಮಂದಾಲಿ ಇತರರು ಆಗಮಿಸಲಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net