ಈ ಕುರಿತು ಪತ್ರಿಕಾ ಪ್ರಕಟಣೆ ಮಾಹಿತಿ ನೀಡಿರುವ ಅವರು, ಗದಗ ತಾಲೂಕಿನ ಬಹುತೇಕ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭಿಸಲಾಗಿದೆ. ನಿತ್ಯ 8000ಕ್ಕೂ ಹೆಚ್ಚು ಜನರು ಕೆಲಸ ನಿರ್ವಹಿಸುತ್ತಿದ್ದಾರೆ. ಆಯುಕ್ತಾಲಯದ ಆದೇಶದಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಮೇ ತಿಂಗಳಾದ್ಯಂತ ಕೆಲಸ ಒದಗಿಸಲು ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲು ಪಿಡಿಒ ಮತ್ತು ಎಲ್ಲ ಹಂತದ ನರೇಗಾ ಯೋಜನೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ತಾಲೂಕು ವ್ಯಾಪ್ತಿಯಲ್ಲಿ ಈಗಾಗಲೇ 1,16,930 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ತಾಲೂಕಿನಲ್ಲಿ ಒಟ್ಟು 24,537 ಸಕ್ರಿಯ ಉದ್ಯೋಗ ಚೀಟಿಗಳಿವೆ. 50,440 ಸಕ್ರಿಯ ಕೂಲಿ ಕಾರ್ಮಿಕರು ಇದ್ದಾರೆ ಎಂದರು.