ಎನ್.ಎಂ.ಎಂ.ಎಸ್.ಪರೀಕ್ಷೆಯ ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿ

Vijayavani-logo
Published on

ಗದಗ: ಎನ್.ಎಂ.ಎಂ.ಎಸ್.( ನ್ಯಾಶನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಪ್ ) ಪರೀಕ್ಷೆಗಳು ಜನೆವರಿ 7 ರಂದು ಜರುಗಲಿವೆ. ಸದರಿ ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳ ಸುತ್ತಲೂ ಜನೆವರಿ 7 ರಂದು ಬೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

 ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚುಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್ , ಫೋಟೋ ಕಾಪಿಯರ್‍ಗಳನ್ನು ಬಂದ ಮಾಡಲು ಆದೇಶಿಸಿದೆ.  ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net