ಶೀಘ್ರದಲ್ಲೆ ಜಿಲ್ಲೆಯಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಭ: ಜಿಲ್ಲಾಧಿಕಾರಿಗಳು

24GDG01C
Published on

ಗದಗ: ಪ್ರಸಕ್ತ ಸಾಲಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಶೀಘ್ರದಲ್ಲೆ ಜಿಲ್ಲೆಯಲ್ಲಿ 50 ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಬೆಳೆಯಾದ ಹೆಸರು ಕಾಳು ಖರೀದಿಗೆ ಅನುಮೋದನೆ ದೊರೆತಿದ್ದು, ನ್ಯಾಶನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ  (NAFED) ಮೂಲಕ ಶೀಘ್ರದಲ್ಲೆ ಗದಗ ಜಿಲ್ಲೆಯಲ್ಲಿ 50 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಪ್ರಕಟಣೆಯ ಮೂಲಕ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net