ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಸಮಿತಿಯ ಸದಸ್ಯರಿಂದ ಮುಂಡರಗಿ ಬಸ್ ನಿಲ್ದಾಣ ಪರಿಶೀಲನೆ

IMG-20250704-WA0066
Published on
ಸ್ವಚ್ಛತೆಗೆ ಪ್ರಥಮ ಆದ್ಯತೆ ವಹಿಸಲು ಜಿಲ್ಲಾಧ್ಯಕ್ಷ ಬಿ.ಬಿ.ಅಸೂಟಿ ಸೂಚನೆ
ಗದಗ: ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ ಯವರ ನೇತೃತ್ವದಲ್ಲಿ ಮುಂಡರಗಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಅಧ್ಯಕ್ಷರಾದ ಡಿ.ಡಿ. ಮುರನಾಳ ರವರ ಹಾಗೂ ಸರ್ವ ಸದಸ್ಯರ ಸಂಯುಕ್ತಾಶ್ರಯದಲ್ಲಿ  ಗುರುವಾರ ದಂದು  ಮುಂಡರಗಿ  ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ಥಾನಿಕ ಪರಿಶೀಲನೆ ಮಾಡಿ ಪ್ರಯಾಣಿಕರ ಅಗತ್ಯ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಪರಿಶೀಲನೆ ನಡೆಸಿದರು.
                 ಮೊದಲು ಬಸ್ ನಿಲ್ದಾಣದ ಆವರಣವನ್ನು ಪರಿಶೀಲನೆ ನಡೆಸಿದ ತಂಡವು ನಿಲ್ದಾಣದ ಸ್ವಚ್ಛತೆಗೆ ಗಮನ ಹರಿಸಬೇಕು. ಮುಂಬರುವ ಜುಲೈ 25.ರಂದು ಪುನ: ಬಸ್‌ನಿಲ್ದಾಣಕ್ಕೆ ಸ್ವಚ್ಛತೆಯ ಪರಿಶೀಲನೆಗಾಗಿ ಆಗಮಿಸುವೆ. ಆ ಸಂದರ್ಭದಲ್ಲಿ ನಿಲ್ದಾಣ ಆವರಣ ಶುಚಿಯಾಗಿರಬೇಕು. ಎಂದು ಜಿಲ್ಲಾಧ್ಯಕ್ಷರಾದ ಬಿ ಬಿ ಅಸೂಟಿ ಯವರು ನುಡಿದರು.
                  ಅದರಂತೆ ನಿಲ್ದಾಣದಲ್ಲಿನ ಸಾರ್ವಜನಿಕರಿಗೆ ಕೂರಲು ಉತ್ತಮ ಆಸನಗಳ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಪ್ಲಾಸ್ಟಿಕ್ ಮುಕ್ತ ನಿಲ್ದಾಣ ಆಗಬೇಕು. ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಗ್ರಾಮಗಳಿಂದ ಮುಂಡರಗಿ ಗೆ ಬಂದು ಹೋಗಲು ಸರಿಯಾದ ಬಸ್ಸಿನ ವ್ಯವಸ್ಥೆ ಮಾಡಬೇಕು ಈ ಕುರಿತು ಅಧಿಕಾರಿಗಳು ಕ್ರಮ ವಹಿಸುವಂತೆ ಬಿ.ಬಿ.ಅಸೂಟಿ ನಿರ್ದೇಶನ ನೀಡಿದರು.
ಶೌಚಾಲಯ ವೀಕ್ಷಣೆ : ನಿಲ್ದಾಣದ ಆವರಣದಲ್ಲಿರುವ ಶೌಚಾಲಯದ ಪರಿಶೀಲನೆ ನಡೆಸಿ ಅಲ್ಲಿಯೂ ಸಹ ಸ್ವಚ್ಛತೆ ಅಗತ್ಯವಾಗಿದೆ. ವಿಕಲಚೇತನರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಾಡಬೇಕು ಅಲ್ಲದೇ ಸಾರ್ವಜನಿಕರಿಂದ ನಿಗದಿತ ಶುಲ್ಕ ಪಡೆದು ಸಾರ್ವಜನಿಕರಿಗೆ ಶೌಚಾಲಯ ಬಳಕೆಗೆ ದೊರೆಯಬೇಕು. ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಬಂದಿದ್ದು. ನಿಗದಿದ್ದ ದರದ ಬೋರ್ಡ್ ಹಾಕಬೇಕು ಪುನ: ದೂರುಗಳು ಬರದಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ನಿಗಾ ವಹಿಸುವಂತೆ ಅವರು ಸೂಚಿಸಿದರು.
ವಿಶ್ರಾಂತಿ ಕೊಠಡಿ : ನಿಲ್ದಾಣದ ಆವರಣದಲ್ಲಿರುವ ಶಿಶು ಪಾಲನಾ ಆರೈಕೆಯ ವಿಶ್ರಾಂತಿ ಕೊಠಡಿಗೆ ಭೇಟಿ ನೀಡಿದ ಅವರು ವಿಶ್ರಾಂತಿ ಕೊಠಡಿಯಲ್ಲಿ ಶುದ್ಧ ಗಾಳಿ, ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಶುಭ್ರವಾಗಿರುವಂತೆ ನೋಡಿಕೊಳ್ಳಬೇಕು ಹಾಗೂ ಪ್ರತಿನಿತ್ಯ ವಿಶ್ರಾಂತಿ ಕೊಠಡಿಗೆ ಸಾರ್ವಜನಿಕರು ಆಗಮಿಸುವಂತೆ ಶುಚಿಯಾಗಿಟ್ಟುಕೊಳ್ಳಲು ಸಾರಿಗೆ ಸಂಸ್ಥೆಯ ಅಧಿಕಾರಿ.ಡಿ.ಸಿ ದೇವರಾಜ ಅವರಿಗೆ ಜಿಲ್ಲಾಧ್ಯಕ್ಷ ಬಿ.ಬಿ.ಅಸೂಟಿ ನಿರ್ದೇಶನ ನೀಡಿದರು.
                  ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯಿಂದ ಜುಲೈ. 25ಕ್ಕೆ ಪುನ: ಪರಿಶೀಲನೆಗೆ ಆಗಮಿಸಲಾಗುವುದು. ಆ ಸಂದರ್ಭದಲ್ಲಿ ಇಂದು ನೀಡಿದ ಎಲ್ಲ ಸೂಚನೆಗಳು ಕಾರ್ಯರೂಪಕ್ಕೆ ಬಂದಿರಬೇಕು. ಇಲ್ಲವಾದಲ್ಲಿ ಸಂಭಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಲಾಗುವುದು ಎಂದರು.
                     ಈ ಸಂಧರ್ಭದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಸದಸ್ಯರಾದ ಈಶ್ವರ ಹುಣಸಿಕಟ್ಟಿ, ಹುಲ್ಕೇಶ್ ಗೌಡ ಪಾಟೀಲ್ ಮುಂಡರಗಿ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮುಂಡರಗಿ ತಾಲೂಕಾ ಸಮಿತಿಯ ಅಧ್ಯಕ್ಷರಾದ ದೇವಪ್ಪ ಡಿ ಮುರನಾಳ ತಾಲೂಕ ಗ್ಯಾರಂಟಿ ಸಮಿತಿಯ ಸದಸ್ಯರಾದಜೈಲಾನಸಾಬ್ ಕೆ ವಡ್ಡಟ್ಟಿ,ನಾಗರಾಜ ಸಜ್ಜನ, ವಿಶ್ವನಾಥಪಾಟೀಲ್, ರಾಮಣ್ಣ ಮಾಳಗಿಮನಿ, ಮುತ್ತುರಾಜ್ ಮಾರುತಿ ಹೊಸಮನಿ, ಗಣೇಶ ರಾಠೋಡ್, ಶ್ರೀಮತಿ ಗೀತಾ ಕೆ ನಾಡಗೌಡರ, ಕಾಶಪ್ಪ ಹೊನ್ನೂರ,  ನಿಂಗಪ್ಪ ಎಮ್ ಮಜ್ಜಿಗೆ, ಸುರೇಶ ಮೇಗಿಲಮನಿ, ಶರಣಪ್ಪ ಮಲ್ಲಾಪುರ, ಉಮೇಶ ಕಲಾಲ್, ಶ್ರೀಮತಿ ಭುವನೇಶ್ವರಿ ಕಲ್ಲಕುಟಿಗ, ಮಹೇಶಕುಮಾರ ದ್ರಾಕ್ಷಿ, ಹಾಗೂ ಸಮಸ್ತ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net