

ಗದಗ: ವಿಶ್ವ ಹೃದಯ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ವಿಭಾಗ ಹಾಗೂ ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜಿಮ್ಸ್ ನರ್ಸಿಂಗ್ ಕಾಲೇಜ್ ದಲ್ಲಿ ವಿಶ್ವ ಹೃದಯ ದಿನಾಚರಣೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಬಿ.ಸಿ.ಕರಿಗೌಡರ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿಶ್ವ ಹೃದಯ ದಿನವನ್ನು ಪರಿಣಾಮಕಾರಿಯಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ನಮ್ಮೆಲ್ಲರ ಮುಖ್ಯ ಕರ್ತವ್ಯವಾಗಿದೆ ಹಾಗೂ ಕೋವಿಡ್ ಗಂಡಾAತರದ ನಂತರ ಹೃದಯ ಸಂಬAಧಿ ಕಾಯಿಲೆಗಳು ಗಣನೀಯವಾಗಿ ಹೆಚ್ಚಿಗೆಯಾಗಿರುವುದರಿಂದ ಅವುಗಳನ್ನು ಹತೋಟಿಗೆ ತರಲು ಶ್ರಮಿÀಸಬೇಕೆಂದು ತಿಳಿಸಿದರು.
ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ.ಸಂಗಮೇಶ ಅಸೂಟಿ ರವರು ಮಾತನಾಡಿ ಆಧುನಿಕ ಜೀವನ ಶೈಲಿ, ಧೂಮಪಾನ, ಮದುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು, ಆರೋಗ್ಯದ ಬಗ್ಗೆ ನಿರ್ಲಕ್ಷö್ಯ ಇವೆಲ್ಲವುದರ ಕಾರಣಗಳಿಂದಾಗಿ ಹೃದಯಕ್ಕೆ ಸಂಬAಧಿಸಿದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಎಚ್ಚರಿಕೆಯ ಗಂಟೆಯಾಗಿದೆ. ಕರೋನಾ ನಂತರ ದಿನಗಳಲ್ಲಿ ಹೃದ್ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ಜನರೆ ಹೆಚ್ಚಿನ ಸಂಖ್ಯೆಯಲ್ಲಿ ಹಠತ್ತಾಗಿ ಹೃದಯಾಘಾತ, ಹೃದಯ ಸ್ತಂಭನಕ್ಕೀಡಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೃದ್ರೋಗಳಿಗೆ ಉಂಟಾಗುತ್ತಿರುವ ಜೀವ ಹಾನಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು “ಪುನೀತ್‌ರಾಜ್‌ಕುಮಾರ್ ಹೃದಯ ಜ್ಯೋತಿ” ಹಾಗೂ ಮುಂತಾದ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ್ ಅವರು ಮಾತನಾಡಿ ಚಟುವಟಿಕೆಗೆ ಹೃದಯವನ್ನು ಬಳಸಿ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಹೃದಯ ದಿನವನ್ನು ಆಚರಿಸುತ್ತಿದ್ದೇವೆ. ಹೃದಯ ಆರೋಗ್ಯವಾಗಿಡಲು ಬೆಳಗಿನ ಅಥವಾ ಸಂಜೆಯ ನಡೆಗೆ ಸಹಾಯಕಾರಿ ಎಂದು ಅಭಿಪ್ರಾಯ ತಿಳಿಸಿದರು.
ಶಸ್ತçಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ಜ್ಯೋತಿ ಕರಿಗೌಡರ, ಪ್ರಾಂಶುಪಾಲರು ಜಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜ್ ಗದಗ, ರವರು ಮಾತನಾಡಿ ನಮ್ಮ ದೇಹವನ್ನು ಸಧೃಡವಾಗಿಟ್ಟುಕೊಳ್ಳಲು ಪ್ರತಿದಿನ ವ್ಯಾಯಾಮ, ಯೋಗಾಸನ, ಪೌಷ್ಠಿಕ ಆಹಾರ ಹಾಗೂ ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 7 ರಿಂದ 8 ಗಂಟೆಯವರೆಗೆ ಆರೋಗ್ಯಕರ ನಿದ್ರೆ ಅವಶ್ಯಕವಾಗಿರುತ್ತದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ. ಶ್ರೀನಿವಾಸ ಆರೇರ ಮುಖ್ಯಸ್ಥರು ಚಿಕ್ಕಮಕ್ಕಳ ವಿಭಾಗ, ರೂಪಸೇನ ಚವ್ಹಾನ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಮ್ಸ್ ನರ್ಸಿಂಗ್ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲಾ ಸಮೀಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಎಂ.ಎಸ್. ರಬ್ಬನಗೌಡ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು