

ಗದಗ: ಗದಗ ನಗರದ ಕಾಟನ್ ಸೇಲ್ಸ ಸೊಸೈಟಿಯ ಆವರಣದಲ್ಲಿ ಗುರುವಾರ ಕರ್ನಾಟಕ ರಾಜ್ಯ ಔಕಾಫ್ ಮಂಡಳಿಯ ಅಂಬುಲೆನ್ಸ್ ನ್ನು ರಾಜ್ಯದ ಕಾನೂನು, ನ್ಯಾಯ ಮಾನನ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರ್ ಸಾಬ ಬಬರ್ಚಿ ,ವ್ಯಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಪಿರಸಾಬ ಕೌತಾಳ,ಅಶೋಕ ಮಂದಾಲಿ, ಸೇರಿದಂತೆ ಗಣ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು